ಕೊರೋನ ವೈರಸ್‍ಗೆ ಲಸಿಕೆ ಕಂಡುಹಿಡಿಯುವ ಯುರೋಪ್ ವಿಜ್ಞಾನಿಗಳ ತಂಡದಲ್ಲಿ ಕನ್ನಡಿಗ

ಬೆಂಗಳೂರು, ಮಾ.16: ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೋನ ವೈರಸ್‍ಗೆ ಲಸಿಕೆ ಕಂಡುಹಿಡಿಯಲು ಯುರೋಪ್ ರಾಷ್ಟ್ರಗಳು ರಚಿಸಿರುವ ವಿಜ್ಞಾನಿಗಳ ತಂಡದಲ್ಲಿ ಕನ್ನಡಿಗರೊಬ್ಬರು ಸ್ಥಾನ ಪಡೆದಿದ್ದಾರೆ.
ಯುರೋಪ್ ರಾಷ್ಟ್ರಗಳು ಒಗ್ಗೂಡಿ 10 ತಂಡಗಳನ್ನು ವ್ಯಾಕ್ಸಿನ್ ಸಂಶೋಧಿಸಲು ರಚಿಸಿದೆ. ಹೀಗೆ ರಚಿಸಿರುವ 'ಯೂರೋಪಿಯನ್ ಟಾಸ್ಕ್ ಫೋರ್ಸ್ ಫಾರ್ ಕೊರೋನ' ತಂಡದಲ್ಲಿ ಕನ್ನಡಿಗ ಯುವ ವಿಜ್ಞಾನಿ ಹಾಸನ ಜಿಲ್ಲೆಯ ಅರಕಲಗೂಡಿನ ಮಹದೇಶ ಪ್ರಸಾದ್ ಸ್ಥಾನ ಪಡೆದಿದ್ದಾರೆ.
ಸದ್ಯ ಬೆಲ್ಜಿಯಂನಲ್ಲಿ ನೆಲೆಸಿರುವ ಅವರು, ಅರಕಲಗೂಡಿನಲ್ಲಿ ಪಿಯು ವಿಜ್ಞಾನ, ಹಾಸನದಲ್ಲಿ ಬಿಎಸ್ಸಿ ಪದವಿ, ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂಎಸ್ಸಿ ಸ್ನಾತಕ ಪದವಿ ಪಡೆದು, ನಂತರ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟರಲ್ ರಿಸರ್ಚರ್ ಆಗಿದ್ದರು. ಇದೀಗ ಜಗತ್ತನ್ನೇ ಬೆಚ್ಚಿಬೀಳಿಸಿದ ಕೊರೊನಾ ವೈರಸ್‌ಗೆ ಲಸಿಕೆ ಕಂಡುಹಿಡಿಯುವ ತಂಡದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.
Next Story





