ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ
ವಯೋಮಿತಿಯಲ್ಲಿ ಹೆಚ್ಚಳ
ಉಡುಪಿ, ಮಾ.17: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಲೇಖಕರ ವಯೋಮಿತಿಯನ್ನು 18ರಿಂದ 40ವರ್ಷಕ್ಕೆ ಹೆಚ್ಚಿಸಲಾಗಿದೆ.
ಅರ್ಜಿಗಳನ್ನು ಎ.15ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-22484516/22017704ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





