ಹಕ್ಕಿಜ್ವರ ಭೀತಿ: ಚಾಮರಾಜನಗರ ಜಿಲ್ಲೆಯಾದ್ಯಂತ ಕೋಳಿ ಮಾಂಸ ಮಾರಾಟ ನಿಷೇಧ

ಸಾಂದರ್ಭಿಕ ಚಿತ್ರ
ಚಾಮರಾಜನಗರ, ಮಾ.17: ನೆರೆಯ ಮೈಸೂರು ಜಿಲ್ಲೆಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಕೋಳಿ ಮಾಂಸ ಮಾರಾಟ ಹಾಗೂ ಸಾಗಾಣಿಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರವಿ, ಮೈಸೂರು ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ಗಡಿ ಚಾಮರಾಜನಗರ ಜಿಲ್ಲೆಗೂ ವಿಸ್ತರವಾಗುವುದನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ಕೋಳಿ ಸಾಗಾಣಿಕೆ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಮುಂದಿನ ಆದೇಶದವರೆಗೆ ನಿಷೇಧ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಕುಕ್ಕಟ ಸಾಗಾಣಿಕೆ ಮತ್ತು ಪ್ರವೇಶಕ್ಕೆ ನಿರ್ಭಂಧ ವನ್ನು ಜಿಲ್ಲಾಡಳಿತ ಹೇರಿದೆ. ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲೇ ಕೋಳಿ ಸಾಗಾಣಿಕೆಗೆ ತಡೆಗೆ ವಿಶೇಷ ತಂಡ ರಚಿಸಿ, ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ 24x7 ಔಷಾಧಾಯಲಯ ತೆರೆಯಲು ಕ್ರಮ ವಹಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ.ಆನಂದ್ ಕುಮಾರ್ ಇದ್ದರು.







