ಸಾರ್ವಜನಿಕ ಅಹವಾಲು ಕಾರ್ಯಕ್ರಮ ರದ್ದು
ಉಡುಪಿ ಮಾ.17: ಕರ್ನಾಟಕ ಲೋಕಾಯುಕ್ತ ಪ್ರಧಾನ ಕಚೇರಿಯ ಆದೇಶ ದಂತೆ ಕರೋನ ಭೀತಿಯ ಪ್ರಯುಕ್ತ ಕರ್ನಾಟಕ ಲೋಕಾಯುಕ್ತ ಉಡುಪಿ ವತಿಯಿಂದ ಮಾ.19ರಿಂದ 30ರವರೆಗೆ ಉಡುಪಿ ಜಿಲ್ಲೆಯ 7 ತಾಲೂಕುಗಳಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಅಹವಾಲು ಕಾರ್ಯಕ್ರಮಗಳನ್ನು ರದ್ದು ಗೊಳಿಸಲಾಗಿದೆ.
ಈ ಕುರಿತ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ. ಹೆಚ್ಚಿನ ಮಾಹಿತಿ ಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂ.ಸಂಖ್ಯೆ 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾ ಯುಕ್ತ, ಉಡುಪಿ ದೂ.ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಉಡುಪಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.
Next Story





