ವಿದ್ಯಾರ್ಥಿ ಆತ್ಮಹತ್ಯೆ
ಕುಂದಾಪುರ, ಮಾ.17: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಮಾ.17ರಂದು ಬೆಳಗ್ಗೆ ಬಳ್ಕೂರು ಎಂಬಲ್ಲಿ ನಡೆದಿದೆ.
ಮೃತರನ್ನು ಸಾಯಿ ಶರಣು(14) ಎಂದು ಗುರುತಿಸಲಾಗಿದೆ.
ಎಂಟನೆ ತರಗತಿಯಲ್ಲಿ ಕಲಿಯುತ್ತಿದ್ದ ಈತನ ತಂದೆತಾಯಿ ತೀರಿ ಹೋಗಿದ್ದು, ಈತನನ್ನು ಚಿಕ್ಕಪ್ಪ ಸಾಕುತ್ತಿದ್ದರು. ಕಲಿಕೆಯಲ್ಲಿ ಹಿಂದುಳಿದು ಸ್ಪಲ್ಪ ಹಠವಾದಿಯಾಗಿರುವ ಈತ, ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





