ತನ್ನ ವಾಹನದಲ್ಲಿ ಗಾಯಾಳುಗಳನ್ನು ಸಾಗಿಸಿ ಮಾನವೀಯತೆ ಮೆರೆದ ಉಡುಪಿ ಜಿಲ್ಲಾಧಿಕಾರಿ

ಕಾಪು, ಮಾ.18: ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಭವಿಸಿದ ಅಪಘಾತದ ಗಾಯಾಗಳುಗಳನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾನವೀಯತೆ ಮೆರೆದಿದ್ದಾರೆ.
ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಗಾಯಗೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತಿದ್ದ ಜಿಲ್ಲಾಧಿಕಾರಿಗಳು, ತಮ್ಮ ವಾಹನ ನಿಲ್ಲಿಸಿದರು. ಗಾಯಗೊಂಡ ಸವಾರರನ್ನು ಕೂಡಲೇ ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸು ವಂತೆ ಅವರು ಸಿಬ್ಬಂದಿಗೆ ಸೂಚಿಸಿದರು.
ಅದರಂತೆ ಸಿಬ್ಬಂದಿ ಗಾಯಾಳುಗಳನ್ನು ಕೊಪ್ಪಲಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಯವರೆಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಇದ್ದರು. ಬಳಿಕ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿಯ ಈ ನಡೆ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಯಿತು.
Next Story





