Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿಯಲ್ಲಿ ಮತ್ತಷ್ಟು ಮುಂಜಾಗ್ರತಾ...

ಕಲಬುರಗಿಯಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮಕ್ಕೆ ಸಚಿವ ಗೋವಿಂದ ಕಾರಜೋಳ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 March 2020 11:35 PM IST
share
ಕಲಬುರಗಿಯಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮಕ್ಕೆ ಸಚಿವ ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು. ಮಾ.17: ಕಲಬುರಗಿ ಜಿಲ್ಲೆಯಲ್ಲಿ ಕೊರೋನ ವೈರಸ್ ಸೊಂಕು ಹರಡದಂತೆ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸೊಂಕಿತರಿಗೆ ಜಾಗೃತಿಯಿಂದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕಲಬುರಗಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್‌ನಲ್ಲಿ ಜಿಲ್ಲಾಧಿಕಾರಿಗಳು ಹಾಗು ಇತರ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸರಕಾರ ಹೊರಡಿಸಿರುವ ಮಾರ್ಗಸೂಚಿಗಳ ಆದೇಶಗಳನ್ನು ನಿಗದಿತ ಅವಧಿಯವರೆಗೆ ಕಟ್ಟುನಿಟ್ಟಾಗಿ ಜಾರಿಯಾಗಿರುವ ಬಗ್ಗೆ ಸೂಕ್ತ ಮೇಲ್ವಿಚಾರಣೆ ವಹಿಸಬೇಕು. ಪ್ರವಾಸಿ ತಾಣಗಳ ಪ್ರವೇಶಗಳಿಗೆ ನಿಷೇಧ ಮಾಡಬೇಕು. ಹೊರದೇಶದಿಂದ ಬಂದವರನ್ನು ಹೋಂ ಕ್ವಾರಂಟೈನ್‌ನಲ್ಲಿಡಬೇಕು. ಇವರ ಮೇಲೆ ನಿಗಾ ವಹಿಸಬೇಕು. ವಿದೇಶಿ ಪ್ರವಾಸಿಗರು, ವಿದೇಶದಿಂದ ಪ್ರಯಾಣಿಸುವವರ ಮೇಲೆ ತೀವ್ರ ನಿಗಾ ವಹಿಸಬೇಕು.

ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ತೀವ್ರ ನಿಗಾವಹಿಸಬೇಕು. ಪೊಲೀಸ್ ಸಿಬ್ಬಂದಿಯ ಕೊರತೆ ಇದ್ದರೆ ಹೋಮ್ ಗಾರ್ಡ್ ಅಥವಾ ಮಾಜಿ ಸೈನಿಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ದಿನ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಬೇಕು. ಪ್ರತಿ ದಿನ ಮೂರು ಬಾರಿ ಮಾಧ್ಯಮ ಪ್ರತಿನಿಧಿಗಳಿಗೆ ಅಧಿಕೃತ ಮಾಹಿತಿ ನೀಡಬೇಕು. ಮಧ್ಯಮದವರಿಗೂ ಸೂಕ್ತ ಜಾಗೃತಿ ಮೂಡಿಸಬೇಕು. ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್‌ಗೆ ಕಟ್ಟುನಿಟ್ಟಾಗಿ ಕ್ರಮವಹಿಸಬೇಕು. ಸಾರ್ವಜನಿಕರಿಗೆ ಹಾಗೂ ಬಸ್, ರೈಲ್ವೆ ನಿಲ್ದಾಣ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು.

ಗಾಣಗಾಪುರ ಧಾರ್ಮಿಕ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚು ನಿಗಾವಹಿಸಿ, ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಜನಸಾಮಾನ್ಯರಿಗೆ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಾರದು. ಅನುದಾನ, ಅಗತ್ಯ ಔಷಧಿ ಸೇರಿ ಯಾವುದೇ ಸಮಸ್ಯೆಗಳಿದ್ದರೆ ಪರಿಹರಿಸುವುದಾಗಿ ಡಿಸಿಎಂ ತಿಳಿಸಿದರು

ಅನಂತರ ಮಾತನಾಡಿದ ಅವರು, ಕೊರೋನ ವೈರಸ್ ಬಗ್ಗೆ ಹಗುರವಾಗಿ ತೆಗೆದುಕೊಳ್ಳಬಾರದು. ಜಾಗೃತಿಯಿಂದ ಇರಬೇಕು. ಬೇಸಿಗೆ ಪ್ರಾರಂಭವಾಗುವವರೆಗೆ ಜಾಗೃತಿಯಿಂದ ಇರಬೇಕು ಎಂದು ತಜ್ಞವೈದ್ಯರು ಸಲಹೆ ನೀಡಿದ್ದಾರೆ. ಸಾರ್ವಜನಿಕರು ಜಾಗೃತಿಯಿಂದ ಇರಬೇಕು ಎಂದು ಮನವಿ ಮಾಡಿದರು. ಕಲಬುರಗಿಯಲ್ಲಿ ಕೊರೋನ ವೈರಸ್‌ನಿಂದ ನಿಧನರಾದ ವ್ಯಕ್ತಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸೋಂಕು ಬಂದಿರುವುದು ನೋವಿನ ಸಂಗತಿಯಾಗಿದೆ. ಇತರ ನಾಲ್ವರ ಸ್ಯಾಂಪಲ್ ಕಳುಹಿಸಲಾಗಿದ್ದು, ಫಲಿತಾಂಶವನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯರು ನಾಳೆ ಜಿಲ್ಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚು ಪ್ರಯಾಣ ಮಾಡಬಾರದು. ಸೋಂಕು ಇರುವ ಪ್ರದೇಶಗಳಿಗೆ ಭೇಟಿ ನೀಡದೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X