Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಮುನ್ನೆಚ್ಚರಿಕೆ: ವಿವಿಧ ಆರೋಗ್ಯ...

ಕೊರೋನ ಮುನ್ನೆಚ್ಚರಿಕೆ: ವಿವಿಧ ಆರೋಗ್ಯ ಕೇಂದ್ರಗಳಿಗೆ ಕೊಡಗು ಜಿಲ್ಲಾಧಿಕಾರಿ ಭೇಟಿ

ಗಡಿಭಾಗದಲ್ಲಿ ಕೋಳಿ, ಕೋಳಿ ಉತ್ಪನ್ನಗಳಿಗೆ ತಡೆ

ವಾರ್ತಾಭಾರತಿವಾರ್ತಾಭಾರತಿ17 March 2020 11:54 PM IST
share
ಕೊರೋನ ಮುನ್ನೆಚ್ಚರಿಕೆ: ವಿವಿಧ ಆರೋಗ್ಯ ಕೇಂದ್ರಗಳಿಗೆ ಕೊಡಗು ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ, ಮಾ.17: ಕೊರೋನ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತ ವಿದೇಶದಿಂದ ಬಂದಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಮುಂದುವರಿಸಿದೆ. ಇದುವರೆಗೆ 165 ಜನರನ್ನು ಪತ್ತೆ ಮಾಡಿದ್ದು, ಈ ಪೈಕಿ 159ಜನರಿಗೆ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆ ಮತ್ತು ಮೂವರು ಪ್ರವಾಸಿಗರಿಗೆ ರೆಸಾರ್ಟ್/ ಹೋಂಸ್ಟೇಗಳಲ್ಲೇ ಸಂಪರ್ಕ ತಡೆ ಮಾಡಲಾಗಿದೆ.

ಅಲ್ಲದೆ ಜಿಲ್ಲಾಡಳಿತದಿಂದ ಆದೇಶವನ್ನು ಹೊರಡಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ವಿವಿಧ  ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ/ಸಾರ್ವಜನಿಕರ ಭೇಟಿಯನ್ನು ಮಾ.21ರವರೆಗೆ ನಿಷೇಧಿಸಲಾಗಿದೆ.   

ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಟಿ ತಪಾಸಣೆ ಮಾಡುವ ಕಾರ್ಯದಡಿ ಮಂಗಳವಾರ ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ 72, ವೀರಾಜಪೇಟೆ ತಾಲೂಕಿನಲ್ಲಿ 41 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 52 ಜನರನ್ನು ಪತ್ತೆ ಹಚ್ಚಲಾಗಿದೆ. ಈವರೆಗೆ ವಿದೇಶದಿಂದ ಬಂದ 3 ವ್ಯಕ್ತಿಗಳಿಗೆ ಸೋಂಕು ತಗುಲಿರುವ ಶಂಕೆ ಇದ್ದು, ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಗಡಿ ಭಾಗದಲ್ಲಿ ತಪಾಸಣೆ
ಕೇರಳ ರಾಜ್ಯ ಗಡಿ ಭಾಗವಾದ ಕರಿಕೆ, ಕುಟ್ಟ ಮತ್ತು ಮಾಕುಟ್ಟ ಗಡಿಭಾಗಗಳಲ್ಲಿ ಕೇರಳ ರಾಜ್ಯದಿಂದ ಜಿಲ್ಲೆಗೆ ಬರುವವರನ್ನು 24x7 ಗಂಟೆಯೂ ತಪಾಸಣೆ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದಲೂ ಹಕ್ಕಿ ಜ್ವರದ ಸಂಬಂಧ ಕೇರಳದಿಂದ ಜಿಲ್ಲೆಗೆ ಬರುವ ಕೋಳಿ ಮತ್ತು ಕೋಳಿ ಉತ್ಪನ್ನಗಳನ್ನು ತಡೆಯಲು ಈ ಮೂರು ಗಡಿ ಭಾಗಗಳಲ್ಲಿ ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗಿದೆ ಮತ್ತು ಈ ಎರಡೂ ಇಲಾಖೆಯ ಚೆಕ್‍ಪೋಸ್ಟ್ ಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ.

ಮಂಗಳವಾರ ಜಿಲ್ಲೆಯ ಗಡಿ ಭಾಗವಾದ ಕುಟ್ಟ ಮತ್ತು ತೋಲ್ಪಟ್ಟಿ ಚೆಕ್‍ಪೋಸ್ಟ್ ಹಾಗೂ ಕುಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‍ಭೇಟಿ ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ತೆರೆಯಲಾದ ಚೆಕ್‍ಪೋಸ್ಟ್ ಗಳ ಪರಿಶೀಲನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X