ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಿಮಿನಲ್ ಪ್ರಕರಣ: ಜಿಲ್ಲಾಧಿಕಾರಿ ಡಾ.ಹರೀಶಕುಮಾರ್
ಕೊರೋನ ವೈರಸ್ ಭೀತಿ

ಕಾರವಾರ, ಮಾ.17: ಕೊರೋನ ವೈರಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂದಿನ 20 ದಿನಗಳ ಕಾಲ ಎಲ್ಲ ಜಾತ್ರೆ, ಸಭೆ, ಸಮಾರಂವನ್ನು ನಿಷೇಧಿಸಲಾಗಿದೆ. ಆರು ಶಂಕಿತರ ಕಫ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾದ ವರದಿ ಬಂದಿದ್ದು, ಇವರಲ್ಲಿ ಯಾರಿಗೂ ಕೊರೋನ ವೈರಸ್ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜಿಪಂ ಸಿಇಒ ಎಂ. ರೋಷನ್ ಮಾತನಾಡಿ, ಜಿಲ್ಲಾಡಳಿತವು ಮಾಸ್ಕ್‌ಗಳನ್ನು ಸಂಗ್ರಹಿಸಿಡುವುದರೊಂದಿಗೆ ಜಿಲ್ಲಾಸ್ಪತ್ರೆಯಲ್ಲಿ 10, ಖಾಸಗಿ 4 ಹಾಗೂ ನೌಕಾನೆಲೆಯ ಆಸ್ಪತ್ರೆಯಲ್ಲಿ 23 ಹಾಸಿಗೆಗಳ ವಿಶೇಷ ವಾರ್ಡ್‌ಗಳನ್ನು ಸ್ಥಾಪಿಸಿದ್ದು, ಅಗತ್ಯ ಬಿದ್ದಲ್ಲಿ ನೌಕಾನೆಲೆಯ ಆಸ್ಪತ್ರೆಯಲ್ಲಿ 100 ಹಾಸಿಗೆಗಳವರೆಗೆ ವಿಸ್ತರಿಸುವ ಅವಕಾಶ ಇದೆ. ಅದೇ ರೀತಿ ಶಿರಸಿ ಮತ್ತು ಮುರುಡೇಶ್ವರದಲ್ಲಿ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭದಲ್ಲಿ ಸಹಾಯ ಹಸ್ತ ನೀಡಲು ಸನ್ನದ್ಧವಾಗಿವೆ ಎಂದು ತಿಳಿಸಿದರು.
ಕಾರವಾರ ಬಂದರಿನಲ್ಲಿ ಇಲ್ಲಿವರೆಗೆ 112 ಜನರಿಗೆ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗಿದೆ ಹಾಗೂ ವ್ಯಾಪಾರಕ್ಕಾಗಿ ವಿದೇಶದಿಂದ ಬರುವ ಹಡುಗುಗಳಲ್ಲಿರುವ ಜನರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಹಡುಗಿನಲ್ಲಿಯೇ ಒದಗಿಸುವ ವ್ಯವಸ್ಥೆ ಮಾಡಲಾಗಿದ್ದು, ಅವರಿಗೆ ಬಂದರು ಒಳಗೆ ಬರಲು ಅವಕಾಶ ನೀಡಲಾಗಿಲ್ಲ ಎಂದು ಮಾಹಿತಿ ನೀಡಿದರು. ಎಸ್ಪಿ ಶಿವಪ್ರಕಾಶ್ ದೇವರಾಜು ಮಾತನಾಡಿದರು.







