Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನಗೆ ಗೋಮೂತ್ರ ಮದ್ದು ಎಂಬುದು...

ಕೊರೋನಗೆ ಗೋಮೂತ್ರ ಮದ್ದು ಎಂಬುದು ಆಧಾರರಹಿತ: ಮಣಿಪಾಲ ಆಸ್ಪತ್ರೆಯ ಡಾ. ಕವಿತಾ

ವಾರ್ತಾಭಾರತಿವಾರ್ತಾಭಾರತಿ18 March 2020 8:51 PM IST
share
ಕೊರೋನಗೆ ಗೋಮೂತ್ರ ಮದ್ದು ಎಂಬುದು ಆಧಾರರಹಿತ: ಮಣಿಪಾಲ ಆಸ್ಪತ್ರೆಯ ಡಾ. ಕವಿತಾ

ಉಡುಪಿ, ಮಾ.18: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಕೊರೋನ ವೈರಸ್‌ಗೆ ಗೋಮೂತ್ರ ಮದ್ದು ಎಂಬ ಸುದ್ದಿಗಳು ಆಧಾರ ರಹಿತವಾಗಿದೆ. ಈ ಸಂಬಂಧ ಸರಕಾರದ ಆರೋಗ್ಯ ಇಲಾಖೆ, ವಿಶ್ವ ಆರೋಗ್ಯ ಸಂಸ್ಥೆ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ನೀಡುವ ಪ್ರಕಟಣೆಗಳೇ ಅಧಿಕೃತವಾದುದು ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸೋಂಕು ರೋಗ ವಿಭಾಗದ ಪ್ರೊಫೆಸರ್ ಡಾ.ಕವಿತಾ ಹೇಳಿದ್ದಾರೆ.

ಉಡುಪಿ ವಕೀಲರ ಸಂಘ ಮತ್ತು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ಬುಧವಾರ ಉಡುಪಿ ವಕೀಲರ ಸಂಘದ ಕಚೇರಿಯಲ್ಲಿ ಆಯೋಜಿಸಲಾದ ಕೊರೋನ ವೈರಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಕೊರೋನ ಭೀತಿಯಿಂದ ಅನಗತ್ಯವಾಗಿ ಸೋಂಕು ಪರೀಕ್ಷಿಸುವ ಕೆಲಸ ಮಾಡಬಾರದು. ಇದರಿಂದ ಪ್ರಯೋಗಾಲಯ, ಸಿಬ್ಬಂದಿಗಳ ಸಮಯ ಹಾಗೂ ಕಿಟ್‌ಗಳು ವ್ಯರ್ಥ ಆಗಲಿವೆ. ಅದೇ ರೀತಿ ಎಲ್ಲರು ಮಾಸ್ಕ್ ಧರಿಸುವ ಅಗತ್ಯ ಕೂಡ ಇರುವುದಿಲ್ಲ. ಯಾರಿಗೆ ಕೆಮ್ಮು, ಶೀತ ಇದೆಯೋ ಅವರು ಮಾತ್ರ ಧರಿಸಿದರೆ ಸಾಕಾಗುತ್ತದೆ. ಅಲ್ಲದೆ ಒಮ್ಮೆ ಬಳಕೆ ಮಾಡಿದ ಮಾಸ್ಕ್‌ನ್ನು ತೆಗೆದ ನಂತರ ಡಸ್ಟ್‌ಬಿನ್‌ಗೆ ಹಾಕಬಾರದು. ಯಾವುದೇ ಕಾರಣಕ್ಕೂ ಮಾಸ್ಕ್‌ನ ಮುಖದ ಭಾಗ ವನ್ನು ಕೈಯಿಂದ ಸ್ಪರ್ಶಿಸಬಾರದು ಎಂದರು.

ಈ ರೋಗ ಹರಡದಂತೆ ಮಾಡುವುದರಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಪಾತ್ರ ಕೂಡ ಬಹಳ ಮುಖ್ಯವಾಗಿದೆ. ರೋಗ ಲಕ್ಷ್ಮಣಗಳಿದ್ದವರು ಕಚೇರಿ ಕೆಲಸಕ್ಕೆ ಹೋಗದೆ, ಮನೆಯಲ್ಲಿಯೇ ಕೆಲಸ ನಿರ್ವಹಿಸಬೇಕು. ಕೂಡಲೇ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆಗೆ ಒಳಪಡಿಸಬೇಕು. ಕೆಮ್ಮುವಾಗ ಟಿಶ್ಯು ಪೇಪರ್ ಗಳನ್ನು ಬಳಸಿದರೆ ಉತ್ತಮ. ನಂತರ ಬಳಸಿದ ಟಿಶ್ಯು ಪೇಪರನ್ನು ಡಸ್ಟ್ ಬಿನ್‌ಗೆ ಹಾಕಬೇಕು. ಎಲ್ಲ ರೀತಿಯ ಸ್ಯಾನಿಟೈಸರ್‌ಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನ ಇಲ್ಲ. ಅದರಲ್ಲಿ ಶೇ.70 ಆಲ್ಕೋಹಾಲ್ ಅಂಶ ಇರುವ ಸ್ಯಾನಿ ಟೈಸರ್‌ಗಳನ್ನು ಮಾತ್ರ ಬಳಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸಿದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ ಮಾತನಾಡಿ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಕೊರೋನ ವೈರಸ್ ಸಮಾಜದಲ್ಲಿ ಹರಡದಂತೆ ತಡೆಯಬಹುದಾಗಿದೆ. ದೇಶದ ಜನಸಂಖ್ಯೆಯ ಶೇ.1 ರಷ್ಟು ಜನರಿಗೆ ಈ ವೈರಸ್ ಹರಡಿದರೂ ಕೂಡ ಅಪಾಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸರಕಾರದ ಜೊತೆ ಕೈಜೋಡಿಸಿ ಸಹಕರಿಸಬೇಕು ಎಂದರು.

ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ವನಮಾಲ ಆನಂದ ರಾವ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ವಂದಿಸಿ ದರು. ವಕೀಲ ರಾಜಶೇಖರ ಶ್ಯಾಮರಾವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X