ಬಾಲಕಿಯ ಅತ್ಯಾಚಾರ ಆರೋಪ: ತಂದೆಯ ಬಂಧನ
ಬಂಟ್ವಾಳ, ಮಾ.18: ಅಪ್ರಾಪ್ತ ವಯಸಿನ ಮಗಳನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ತಂದೆಯನ್ನು ಪೊಲೀಸರು ಬಂಧಿಸಿದ್ದು ಅಸ್ವಸ್ಥಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಎಂಬಲ್ಲಿ ಈ ಘಟನೆ ನಡೆದಿದ್ದು ಆರೋಪಿ ತಂದೆಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೂರು ವರ್ಷಗಳಿಗೆ ನಿರಂತರವಾಗಿ ಮಗಳನ್ನು ಅತ್ಯಾಚಾರ ಮಾಡುತ್ತಿದ್ದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಮತ್ತೆ ಅತ್ಯಾಚಾರ ಎಸಗಿದ್ದು ಈ ವೇಳೆ ಬಾಲಕಿ ಅಸ್ವಸ್ಥಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಹಾಗೂ ವಿಟ್ಲ ಎಸ್ಸೈ ವಿನೋದ್ ರೆಡ್ಡಿಯವರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
Next Story





