Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಂಗಳೂರು ಧರ್ಮಪ್ರಾತದ ಎಲ್ಲ ಚರ್ಚ್‌ಗಳ...

​ಮಂಗಳೂರು ಧರ್ಮಪ್ರಾತದ ಎಲ್ಲ ಚರ್ಚ್‌ಗಳ ಬಲಿಪೂಜೆ ಮಾ.31ರವರೆಗೆ ರದ್ದು: ಬಿಷಪ್

ವಾರ್ತಾಭಾರತಿವಾರ್ತಾಭಾರತಿ18 March 2020 10:05 PM IST
share

ಮಂಗಳೂರು, ಮಾ.18: ಕೊರೋನ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಮಂಗಳೂರು ಧರ್ಮಪ್ರಾಂತದ ಎಲ್ಲ ಚರ್ಚ್‌ಗಳಲ್ಲಿ ನಿಗದಿತ ಸಮಯದಲ್ಲಿ ನಡೆಯುವ ಎಲ್ಲ ಬಲಿಪೂಜೆಗಳನ್ನು ಮಾ.31ರವರೆಗೆ ರದ್ದುಗೊಳಿಸಲಾಗಿದೆ ಎಂದು ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ತಿಳಿಸಿದ್ದಾರೆ.

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನ ಸೋಂಕು ಮಂಗಳೂರಿನಲ್ಲಿ ಭೀತಿ ಹುಟ್ಟಿಸಿದೆ. ಮುಂಜಾಗ್ರತಾ ಕ್ರಮವಾಗಿ ಧಾರ್ಮಿಕ ಕಾರ್ಯ ಕ್ರಮಗಳನ್ನು ರದ್ದುಪಡಿಸಲು ಜಿಲ್ಲಾಡಳಿತವು ಆದೇಶ ನೀಡಿದ್ದು, ಚರ್ಚ್ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿನ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸ ಲಾಗಿದೆ. ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಬಿಷಪ್ ಸ್ಪಷ್ಟಪಡಿಸಿದ್ದಾರೆ.

ಪ್ರಸಕ್ತ ಪರಿಸ್ಥಿತಿಯಲ್ಲಿ ನಮ್ಮ ಧಾರ್ಮಿಕ ಕಾರ್ಯಕ್ರಮ, ಆರಾಧನೆ, ನಂಬಿಕೆಯ ಆಚರಣೆಗಳಲ್ಲಿ ಕೆಲವನ್ನು ಬದಲಾವಣೆ ಮಾಡುವ ಅಗತ್ಯವಿದೆ. ಎಂದಿನಂತೆಯೇ ಸಮುದಾಯದೊಂದಿಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗದಿರಬಹುದು. ಆದರೆ ನಾವು ಖಂಡಿತವಾಗಿ ಜನರಿಗಾಗಿ ಪ್ರಾರ್ಥನೆ ಮಾಡುವುದಾಗಿ ವಾಗ್ದಾನ ನೀಡುತ್ತಿದ್ದೇವೆ ಎಂದು ಹೇಳಿದರು.

ವೈಯಕ್ತಿಕ ಆರಾಧನೆಗೆ ಅವಕಾಶ: ಚರ್ಚ್‌ಗಳು ವೈಯಕ್ತಿಕ ಆರಾಧನೆ, ಧ್ಯಾನ ಮಾಡಲು ಮುಕ್ತ ಅವಕಾಶ ನೀಡಲಾಗಿದೆ. ಈ ಸಂದರ್ಭ ಧಾರಾಳವಾಗಿ ಪ್ರಾರ್ಥನೆ ಸಲ್ಲಿಸಬಹುದು. ಖಾಸಗಿಯಾಗಿ ಪ್ರಾರ್ಥಿಸಲು ಹಾಗೂ ಆಧ್ಯಾತ್ಮಿಕವಾಗಿ ಭಗವಂತನೊಂದಿಗೆ ಒಡನಾಟ ಇಟ್ಟು ಕೊಳ್ಳಲು ಸಂಪೂರ್ಣವಾಗಿ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.

ಗುಂಪು ಪ್ರಾರ್ಥನೆ ನಿಷಿದ್ಧ: ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಚರ್ಚ್‌ನಲ್ಲಿ ಗುಂಪು ಗುಂಪಾಗಿ ಪ್ರಾರ್ಥನೆ ಸಲ್ಲಿಸಲು, ಸಭೆ ಸೇರುವುದನ್ನು ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ವೈಯಕ್ತಿಕವಾಗಿ ಪ್ರಾರ್ಥನೆ ಸಲ್ಲಿಸುವಾಗ ಮತ್ತೊಬ್ಬರಿಂದ ಸಾಕಷ್ಟು ಅಂತರ ಕಾಯ್ದು ಕೊಳ್ಳಬೇಕು. ಚರ್ಚ್‌ನಲ್ಲಿ ಹೆಚ್ಚು ಜನರು ಗುಂಪುಗೂಡದಂತೆ ನೋಡಿಕೊಳ್ಳುವುದು ಪ್ಯಾರಿಷ್ ಪ್ರೀಸ್ಟ್ ಅವರ ಜವಾಬ್ದಾರಿಯಾಗಿದೆ.

ಮಾ.31ರವರೆಗಿನ ಎಲ್ಲ ರವಿವಾರದ ವಿಶೇಷ ಪ್ರಾರ್ಥನೆಗಳಿಗೆ ವಿನಾಯಿತಿ ನೀಡಲಾಗಿದೆ. ಚರ್ಚ್‌ನ ಫಾದರ್‌ಗಳು ಸಾರ್ವಜನಿಕರ ಅನುಪಸ್ಥಿತಿಯಲ್ಲಿ ಪ್ರಾರ್ಥನೆ ಸಲ್ಲಿಸುವುದು ಕಡ್ಡಾಯವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದವರು ಚರ್ಚ್‌ಗಳಿಗೆ ಭೇಟಿ ನೀಡುವುದನ್ನು ತಡೆಗಟ್ಟಬೇಕು. ಆಧ್ಯಾತ್ಮಿಕ ಕಾರ್ಯಕ್ರಮಗಳಾದ ಸಾಮಾನ್ಯ ಪ್ರಾಯಶ್ಚಿತ ಸೇವೆ ಸಹಿತ ಮತ್ತಿತರ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಮ್ಮೇಳನ, ಸೆಮಿನಾರ್, ಸಣ್ಣ ಕೂಟಗಳು, ಚರ್ಚ್ ಶಾಲಾ ಕಾರ್ಯಕ್ರಮ, ಮೆರವಣಿಗೆಗಳನ್ನು ನಿಷಿದ್ಧಗೊಳಿಸಲಾಗಿದೆ ಎಂದು ಬಿಷಪ್ ಹೇಳಿದ್ದಾರೆ.

ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಸಾರಿಗೆ ಮತ್ತು ಇತರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಆದೇಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಆರೋಗ್ಯ ವಿಷಯದಲ್ಲಿ ಕಾಳಜಿ ವಹಿಸಬೇಕು ಎಂದು ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X