Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ: ದ.ಕ. ಜಿಲ್ಲೆಯಲ್ಲಿ 632 ಮಂದಿ...

ಕೊರೋನ: ದ.ಕ. ಜಿಲ್ಲೆಯಲ್ಲಿ 632 ಮಂದಿ ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ18 March 2020 10:30 PM IST
share

ಮಂಗಳೂರು, ಮಾ.18: ಕೊರೋನ ಸೋಂಕು ತಡೆಗೆ ಜಿಲ್ಲಾ ಆರೋಗ್ಯ ಇಲಾಖೆಯು ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಎನ್‌ಎಂಪಿಟಿ ಸಹಿತ ಜಿಲ್ಲೆಯ ವಿವಿಧೆಡೆ ಸುರಕ್ಷತಾ ದೃಷ್ಟಿಯಿಂದ 632 ಮಂದಿಯನ್ನು ಬುಧವಾರ ತಪಾಸಣೆ ನಡೆಸಿದೆ.

ಕೊರೋನ ಶಂಕೆಯಲ್ಲಿ 689 ಮಂದಿಯನ್ನು ಅವರ ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಿ, ನಿಗಾ ವಹಿಸಲಾಗಿದೆ. ಪ್ರತ್ಯೇಕಿಸಲಾಗಿ ಇರಿಸಿದ್ದ ಎಂಟು ಮಂದಿಯ ಅವಧಿಯು ಪೂರ್ಣಗೊಂಡಿದೆ. ಏತನ್ಮಧ್ಯೆ, ಮೂವರ ರಕ್ತ ಮತ್ತು ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಬುಧವಾರ 14 ಸ್ಯಾಂಪಲ್‌ಗಳ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ವರದಿಗಳಾಗಿವೆ. ಹೊಸದಾಗಿ ಇಬ್ಬರ ಮೇಲೆ ಜಿಲ್ಲಾ ಆರೋಗ್ಯ ಇಲಾಖೆ ವಿಶೇಷ ನಿಗಾ ಇರಿಸಿದೆ.

55,241 ಮನೆಗೆ ಭೇಟಿ: ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೂ ಭೇಟಿ ನೀಡುತ್ತಿದ್ದು, ಈವರೆಗೆ 55,241 ಮನೆಗಳಿಗೆ ಭೇಟಿ ನೀಡಿದ್ದಾರೆ. 2,12,639 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ವಿದೇಶದಿಂದ ಬಂದ ಪ್ರಯಾಣಿಕರನ್ನು ಮನೆಯಲ್ಲಿಯೇ ಇರುವಂತೆ ಮಾಹಿತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸುವ ಬಗ್ಗೆ ಸ್ಥಳೀಯ ಸುದ್ದಿವಾಹಿನಿಗಳಲ್ಲಿ ಏಳು ಕಾರ್ಯಕ್ರಮ ಹಾಗೂ ಸ್ಥಳೀಯ ರೇಡಿಯೊದಲ್ಲಿ ಮೂರು ಕಾರ್ಯಕ್ರಮಗಳನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1,331 ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಕ್ರಮ, ಕೆಎಸ್ಸಾರ್ಟಿಸಿ ಡಿಪೋದಲ್ಲಿ ಎಂಟು ತರಬೇತಿ ಕಾರ್ಯಕ್ರಮ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಒಂದು ಕಾರ್ಯಕ್ರಮ ಆಯೋಜಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಲಪಾಡಿ, ಮಂಗಳೂರು ಜಂಕ್ಷನ್ ಮತ್ತು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದ್ದು, ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X