ಸೌದಿಯಿಂದ ಹಿಂದಿರುಗಿದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಇರಲು ನಿರ್ಧರಿಸಿದ ಸಂಸದ ಸುರೇಶ್ ಪ್ರಭು

ಹೊಸದಿಲ್ಲಿ, ಮಾ. 18: ಸೌದಿ ಅರೇಬಿಯಾಕ್ಕೆ ತೆರಳಿ ಮಾರ್ಚ್ 10ರಂದು ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಸುರೇಶ್ ಪ್ರಭು ಅವರು ತನ್ನ ನಿವಾಸದಲ್ಲಿ ಮುಂದಿನ 14 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಪ್ರತ್ಯೇಕವಾಗಿ ಇರಲು ನಿರ್ಧರಿಸಿದ್ದಾರೆ. ಪ್ರಭು ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿಲ್ಲ.
ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕವಾಗಿ ಇರಲು ಅವರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಾನು ಭೇಟಿ ನೀಡಿದ ವೈದ್ಯಕೀಯ ಸಂಸ್ಥೆಯಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೇಂದ್ರದ ಸಹಾಯಕ ಸಚಿವ ವಿ. ಮುರಳೀಧರನ್ ಮುನ್ನೆಚ್ಚರಿಕೆ ಕ್ರಮವಾಗಿ ದಿಲ್ಲಿಯಲ್ಲಿರುವ ತನ್ನ ನಿವಾಸದಲ್ಲಿ ಸ್ವಯಂಪ್ರೇರಿತ ಪ್ರತ್ಯೇಕವಾಗಿ ಇದ್ದರು.
Next Story





