ಕೊಡಗಿನ ವ್ಯಕ್ತಿಗೆ ಕೊರೋನಾ ವೈರಸ್ ಸೋಂಕು ದೃಢ
ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು : ಕೊಡಗಿನಲ್ಲಿ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸೌದಿ ಅರೆಬಿಯಾದ ಪ್ರವಾಸದಿಂದ ಬಂದಿರುವ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿದ್ದು, ಆರೋಗ್ಯ ಸಚಿವ ಶ್ರೀರಾಮುಲು ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ.
ಅವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಇಂದು ಕೊಡಗಿನಲ್ಲಿ ಮೊದಲ #COVID19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #COVID19 ಪ್ರಕರಣವಾಗಿದೆ.
— B Sriramulu (@sriramulubjp) March 19, 2020
Next Story





