ಕಲಬುರಗಿ: ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತ್ಯು

ಕಲಬುರಗಿ: ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಲೈನ್ ಮ್ಯಾನ್ ಕಂಬದ ಮೇಲೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಗುಲ್ಬರ್ಗಾ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಬ್ರಾಹೀಂ ಮೃತ ಲೈನ್ ಮ್ಯಾನ್ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಜಿಲ್ಲೆಯಲ್ಲಿ ಮಳೆಯಿಂದ ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಇಂದು ಬೆಳಗ್ಗೆ ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಇಬ್ರಾಹಿಂ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಂಬದ ಮೇಲೆಯೇ ಮೃತಪಟ್ಟಿದ್ದಾರೆ.
ಕಂಬ ಹತ್ತುವ ಮುಂಚೆ ಮುಖ್ಯ ಲೈನ್ ಬಂದ್ ಮಾಡಲಾಗಿತ್ತು ಎಂದು ಹೇಳಲಾಗುತ್ತಿದ್ದು, ಯಾರೋ ಫ್ಯೂಜ್ ಹಾಕಿರುವ ಸಾಧ್ಯತೆಯಿಂದ ಘಟನೆ ನಡೆದಿದೆ ಎಂದು ಅನುಮಾನ ವ್ಯಕ್ತವಾಗಿದೆ.
ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Next Story





