ಕೊರೋನ ವೈರಸ್ ಭೀತಿ: ಕಲಬುರಗಿಯಲ್ಲಿ 144 ಸೆಕ್ಷನ್ ಜಾರಿ

ಕಲಬುರಗಿ. ಮಾ.19: ಕೊರೋನ ವೈರಸ್ ಸೋಂಕಿತ ವೃದ್ಧನ ಸಾವಿನಿಂದಾಗಿ ಕಲಬುರಗಿ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಾತ್ರಿ 8 ಗಂಟೆಯಿಂದಲೇ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿ ಜನ ಸಂಚಾರ ಕಡಿಮೆಯಾಗಿತ್ತು. ಆದರೂ ಜನತೆ ರಸ್ತೆಯಲ್ಲಿ ಓಡಾಡುವುದನ್ನು ನಿಲ್ಲಿಸಿರಲಿಲ್ಲ. ಜನತೆಯ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ 144 ಕಲಂ ಜಾರಿ ಮಾಡಲಾಗಿದ್ದು, ಜನ ಗುಂಪು ಗುಂಪಾಗಿ ತಿರುಗಾಡುವುದನ್ನು ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿ ಬಿ.ಶರತ್ ಸೂಚಿಸಿದ್ದಾರೆ.
Next Story





