Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದೇಶಗಳಿಂದ ಬರುವ ಕೊರೋನ ವೈರಸ್ ಶಂಕಿತರ...

ವಿದೇಶಗಳಿಂದ ಬರುವ ಕೊರೋನ ವೈರಸ್ ಶಂಕಿತರ ಚಿಕಿತ್ಸೆಗೆ ಗ್ರಂಥಾಲಯ ಕಟ್ಟಡ ಬಳಕೆ: ಉಡುಪಿ ಜಿಲ್ಲಾಧಿಕಾರಿ

ಕೊರೋನ ವೈರಸ್ ವಿರುದ್ಧ ಜಿಲ್ಲಾಡಳಿತದಿಂದ ಹಲವು ಕ್ರಮ

ವಾರ್ತಾಭಾರತಿವಾರ್ತಾಭಾರತಿ19 March 2020 8:32 PM IST
share
ವಿದೇಶಗಳಿಂದ ಬರುವ ಕೊರೋನ ವೈರಸ್ ಶಂಕಿತರ ಚಿಕಿತ್ಸೆಗೆ ಗ್ರಂಥಾಲಯ ಕಟ್ಟಡ ಬಳಕೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮಾ.19: ಶಂಕಿತ ಕೊರೋನ ವೈರಸ್ ಸೋಂಕಿತರಿಗಾಗಿ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ 10, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಗಳಲ್ಲಿ ತಲಾ 5 ಹಾಗೂ ಮಣಿಪಾಲದ ಕೆಎಂಸಿಯಲ್ಲಿ ಸದ್ಯ 10 ಬೆಡ್‌ಗಳ ಪ್ರತ್ಯೇಕ ವಾರ್ಡುಗಳಿದ್ದು, ಇವುಗಳೊಂದಿಗೆ ವಿದೇಶಗಳಿಂದ ಆಗಮಿಸುವ ಬಿ ಕೆಟಗರಿಯ ಶಂಕಿತರ ಚಿಕಿತ್ಸೆಗಾಗಿ ಅಜ್ಜರಕಾಡಿನಲ್ಲಿರುವ ನೂತನ ಗ್ರಂಥಾಲಯ ಕಟ್ಟಡವನ್ನು ಸಜ್ಜುಗೊಳಿಸ ಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಂಜೆ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಜಿಲ್ಲಾಸ್ಪತ್ರೆಯ 10 ಬೆಡ್, ಕುಂದಾಪುರ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆಯ ತಲಾ 5 ಬೆಡ್‌ಗಳ ಪ್ರತ್ಯೇಕಿತ ವಾರ್ಡು ಈಗಾಗಲೇ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅದೇ ರೀತಿ ಕೆಎಂಸಿಯಲ್ಲಿ ಈಗಾಗಲೇ 10 ಬೆಡ್‌ಗಳ ವಾರ್ಡ್ ಸಿದ್ದವಿದ್ದು, ಅಗತ್ಯ ಬಿದ್ದರೆ ಇನ್ನು ಹೆಚ್ಚು ಬೆಡ್ ನೀಡಲು ತಿಳಿಸಿದ್ದೇವೆ ಎಂದು ಅವರು ಹೇಳಿದರು.

ಇದರೊಂದಿಗೆ ವಿದೇಶಗಳಿಂದ ವಿಮಾನನಿಲ್ದಾಣಗಳಿಗೆ ಆಗಮಿಸುವ ಉಡುಪಿ ಜಿಲ್ಲೆಯವರಲ್ಲಿ ‘ಬಿ ಕೆಟಗರಿ’ಯ ಜನರಿಗಾಗಿ ಅಜ್ಜರಕಾಡಿನಲ್ಲಿ ಗ್ರಂಥಾಲಯಕ್ಕಾಗಿ ನಿರ್ಮಿಸಲಾದ ನೂತನ ಕಟ್ಟಡವನ್ನು ಇದೀಗ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದಕ್ಕಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲು 30 ಲಕ್ಷ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಇಲ್ಲಿ ಸದ್ಯ 30 ಮಂದಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅಗತ್ಯ ಬಿದ್ದರೆ 100 ಮಂದಿಗೂ ಇಲ್ಲಿ ಅವಕಾಶವಿದೆ ಎಂದು ಜಗದೀಶ್ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬಂದು ‘ಎ ಕೆಟಗರಿ’ಯಲ್ಲಿ ಬರುವ ವರಿಗೆ (ಅಂದರೆ ಸೋಂಕು ಪತ್ತೆಯಾಗುವವರು) ಅಲ್ಲಿಯೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಇವರಲ್ಲಿ ಜಿಲ್ಲೆಯ ಶಂಕಿತರಿದ್ದರೆ -ಬಿ ಕೆಟಗರಿಯ- ಅವರನ್ನು ಮನೆಗೆ ಕಳುಹಿಸದೇ ನೂತನ ಕಟ್ಟಡದಲ್ಲಿ 14ರಿಂದ 28 ದಿನಗಳ ಕಾಲ ನಿರ್ಬಂಧದಲ್ಲಿರಿಸಲಾಗುವುದು. ಇನ್ನು ಆರೋಗ್ಯವಾಗಿರುವವರಿಗೆ ಅವರವರ ಮನೆಯಲ್ಲೇ ನಿರ್ಧಿಷ್ಟ ಅವಧಿಯವರಿಗೆ ‘ನಿರ್ಬಂಧ’ ದಲ್ಲಿರಿ ಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕೊರೋನ ವೈರಸ್ ಹರಡದಂತೆ ತಡೆಯಲು ಜಿಲ್ಲಾಡಳಿತ ಈಗಾಗಲೇ ಸಮರೋಪಾದಿಯಲ್ಲಿ ಬಹಳಷ್ಟು ಕ್ರಮಗಳನ್ನು ತೆಗೆದು ಕೊಂಡಿದೆ. ಈ ಮೂಲಕ ಸಾರ್ವಜನಿಕರ ಆತಂಕವನ್ನು ದೂರ ಮಾಡುವ ಪ್ರಯತ್ನವನ್ನು ನಡೆಸಿದೆ. ಈವರೆಗೆ ಇಂದು ಶಂಕಿತ ಕೊರೋನ ವೈರಸ್ ಸೋಂಕಿಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮೂವರು ಸೇರಿದಂತೆ ಒಟ್ಟು 24 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಇವರಲ್ಲಿ ಒಟ್ಟು 16 ಮಂದಿಯ ಪರೀಕ್ಷಾ ವರದಿ ಬಂದಿದ್ದು ಎಲ್ಲರದೂ ಸೋಂಕಿಗೆ ನೆಗೆಟಿವ್ ಆಗಿದೆ. ಇನ್ನು ನಿನ್ನೆ ಸೇರ್ಪಡೆಗೊಂಡ ಐವರ ವರದಿಗಳು ಬರಲು ಬಾಕಿ ಇದೆ ಎಂದರು.

ಇಂದು ಶಂಕಿತ ಕೊರೋನ ವೈರಸ್ ಸೋಂಕಿನ ಪರೀಕ್ಷೆಗಾಗಿ ಮಾ.10ರಂದು ಯುಎಇಯಿಂದ ಬಂದವರು ಕುಂದಾಪುರದ ತಾಲೂಕು ಆಸ್ಪತ್ರೆಗೆ, ಮಾ.10ರಂದು ದುಬಾಯಿಯಿಂದ ಬಂದವರು ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆಗೆ ಹಾಗೂ ಮಾ.11ರಂದು ಜರ್ಮನಿಯಿಂದ ಬಂದವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇವರೆಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಕ್ಕೆ ಬೇಡಿಕೆ: ಇನ್ನುಳಿದಂತೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ ಶಂಕಿತ ಕೊರೋನ ವೈರಸ್ ಸೋಂಕಿತರು ಹಾಗೂ ಈಚೆಗೆ ವಿದೇಶಗಳಿಗೆ ತೆರಳಿದ ದಾಖಲೆ ಇರುವವರನ್ನು ಪರೀಕ್ಷಿಸಿ, ಜಿಲ್ಲಾಸ್ಪತ್ರೆಗಳಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಜಿಲ್ಲೆಯ ಮಣಿಪಾಲದಲ್ಲಿ ವೈರಸ್ ಪರೀಕ್ಷೆಯ ಕೇಂದ್ರವೊಂದನ್ನು ತೆರೆಯುವಂತೆ ಪ್ರಸ್ತಾಪವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಲಾಗಿದೆ. ಇದಕ್ಕೆ ಕೇಂದ್ರದ ಅನುಮತಿ ಬೇಕಿರುವುದರಿಂದ ಅವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಚಿತ್ರಮಂದಿರ, ಮಾಲ್‌ಗಳು, ಮೆಲ್ಟಿಫ್ಲೆಕ್ಸ್‌ಗಳನ್ನು ಮುಚ್ಚಿಸ ಲಾಗಿದೆ. ಅದೇ ರೀತಿ ರಾಜ್ಯ ಸರಕಾರದ ಸೂಚನೆಯಂತೆ ಬಿಗ್‌ಬಜಾರ್ ನಲ್ಲಿರುವ ಗ್ರಾಸರಿ ಶಾಪ್‌ನ್ನು ತೆರೆದಿರಿಸಲಾಗಿದೆ. ಉಳಿದೆಲ್ಲಾ ವಿಭಾಗಗಳನ್ನು ಮುಚ್ಚಿಸಲಾಗಿದೆ ಎಂದರು.

ಪ್ರವಾಸಿ ಕೇಂದ್ರ ಬಂದ್: ಜಿಲ್ಲೆಯ ಎಲ್ಲಾ ಪ್ರವಾಸಿ ಕೇಂದ್ರಗಳನ್ನು ಮುಚ್ಚಿಸಲಾಗಿದೆ. ಜಿಲ್ಲೆಯ ಎಲ್ಲಾ ವೈದ್ಯರಿಗೆ, ಅಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಕೊರೋನ ವೈರಸ್ ಕುರಿತಂತೆ ಇಲಾಖೆಯಿಂದ ತರಬೇತಿಯನ್ನು ನೀಡಲಾಗಿದೆ.

ಫೆ.29ರಿಂದ ಈವರೆಗೆ ಉಡುಪಿ ಜಿಲ್ಲೆಯ 237 ಮಂದಿ ವಿದೇಶಗಳಿಂದ ಆಗಮಿಸಿದ ವರದಿ ಬಂದಿದ್ದು, ಅವರೆಲ್ಲರ ಮೇಲೆ ನಿಗಾ ಇರಿಸಲಾಗಿದೆ ಎಂದು ಜಿ.ಜಗದೀಶ್ ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಎಡಿಸಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರದೀಪ್‌ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂಧನ್ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X