ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೋನ ಸೋಂಕು ತಗುಲಿರುವ ಶಂಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಮಾ.19: ನಗರದ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೋನ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಮಾಹಿತಿ ಕುರಿತಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇನ್ನು ದೃಢಪಡಿಸಿಲ್ಲ.
ಕೊರೋನ ಸೋಂಕಿಗೆ ತುತ್ತಾಗಿದ್ದ ಟೆಕ್ಕಿಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಪಡೆದ ಬಳಿಕ ಈ ಟೆಕ್ಕಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆದರೆ, ಟೆಕ್ಕಿಗೆ ಚಿಕಿತ್ಸೆ ನೀಡಿದ್ದ ತಂಡದಲ್ಲಿದ್ದ ವೈದ್ಯರೊಬ್ಬರಲ್ಲಿ ನೆಗಡಿ, ಜ್ವರ ಕಂಡುಬಂದಿದೆ. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಮಧ್ಯೆ ಕೆಮ್ಮು, ಜ್ವರ ಕಾಣಿಸಿಕೊಂಡಿರುವ ವೈದ್ಯರ ರಕ್ತದ ಮಾದರಿಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯಕೀಯ ವರದಿಯನ್ನು ಎದುರು ನೋಡಲಾಗುತ್ತಿದೆ. ಶಂಕೆ ಇರುವ ವ್ಯಕ್ತಿಯನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
Next Story





