ಕೊರೋನ ವೈರಸ್ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆ ಮೀಸಲು: ಸಚಿವ ಡಾ.ಕೆ ಸುಧಾಕರ್

ಬೆಂಗಳೂರು, ಮಾ.19: ಕೊರೋನ ವೈರಸ್ ಮುನ್ನೆಚ್ಚರಿಕೆ ಕ್ರಮವಾಗಿ ಬಿಬಿಎಂಪಿ ಈಗಾಗಲೇ 200 ಹಾಸಿಗೆಯ ಆಸ್ಪತ್ರೆ ಕಟ್ಟಿಸಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಅದು ಕೇವಲ ಕೋವಿಡ್-19ಗೆ ಸೀಮಿತವಾಗಿರಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೂ 14 ಕೇಸ್ ದಾಖಲಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನ ಸೋಂಕಿತರಿಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಬ್ರಾಡ್‌ವೇ ನಿರ್ಮಾಣ ಮಾಡಲಾಗಿದೆ. ಮಾ.19ರಂದು ಆರೋಗ್ಯ ಇಲಾಖೆಗೆ ಹಸ್ತಾಂತರವಾಗಲಿದೆ. ಅದರಲ್ಲಿ ಐದು ಕಡೆ ಲ್ಯಾಬ್ ಟೆಸ್ಟಿಂಗ್ ಇದೆ. ಪ್ರತಿ ದಿನ 500 ಸ್ಯಾಂಪಲ್‌ಗಳ ಪರೀಕ್ಷೆ ನಡೆಯುತ್ತಿದೆ ಎಂದರು.
ರಾಜ್ಯದಲ್ಲಿ 14 ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿರುವವರ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಜನರು ಯಾವುದೇ ವದಂತಿಗೆ ಆಸ್ಪದ ನೀಡಬೇಡಿ ಎಂದು ಅವರು ಮನವಿ ಮಾಡಿದರು.
Next Story





