ಕೊರೋನ ಭೀತಿ: ಲೋಕಸೇವಾ ಆಯೋಗದ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಮಾ.19: ಮಾ.22 ರಂದು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗ, ಮಾ.18ರಂದು ಕೋವಿಡ್-19 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ, ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿರುತ್ತದೆ. ಈ ಹಿನ್ನೆಲೆಯಲ್ಲಿ ಮಾ.22ರಂದು ನಿಗದಿ ಪಡಿಸಲಾಗಿದ್ದ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಈ ಪರೀಕ್ಷಾ ದಿನಾಂಕದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಆಯೋಗದ www.kpsc.kar.nic.in ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.
Next Story





