Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇರಳ ನಮಗೆ ಮಾದರಿಯಾಗಬಾರದೇಕೆ?: ರಾಜ್ಯ...

ಕೇರಳ ನಮಗೆ ಮಾದರಿಯಾಗಬಾರದೇಕೆ?: ರಾಜ್ಯ ಸರಕಾರಕ್ಕೆ ಎಚ್‌ಡಿಕೆ ಪ್ರಶ್ನೆ

ಕೊರೋನ ವೈರಸ್‌

ವಾರ್ತಾಭಾರತಿವಾರ್ತಾಭಾರತಿ20 March 2020 5:13 PM IST
share
ಕೇರಳ ನಮಗೆ ಮಾದರಿಯಾಗಬಾರದೇಕೆ?: ರಾಜ್ಯ ಸರಕಾರಕ್ಕೆ ಎಚ್‌ಡಿಕೆ ಪ್ರಶ್ನೆ

ಬೆಂಗಳೂರು, ಮಾ.20: ಕೊರೋನ ವೈರಸ್‌ನಿಂದಾಗಿ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಸರಕಾರ ಅಲ್ಲಿನ ಜನರಿಗೆ 20 ಸಾವಿರ ಕೋಟಿ ರೂ.ಪ್ಯಾಕೇಜ್ ಘೋಷಿಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, ನರೇಗಾ ಯೋಜನೆಗೆ ಅನುದಾನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ, ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದಲ್ಲಿ 26 ಕೊರೋನ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ. ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ. ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, ನರೇಗಾ ಯೋಜನೆಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೋನ ವೈರಸ್‌ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರಕಾರ ಬಡವರ ಪರ ನಿಲುವು ತಾಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

#coronavirus ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ ₹20,000 ಕೋಟಿ ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, MGNREGSಗೆ ಅನುದಾನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ, ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ?
(1/4)

— H D Kumaraswamy (@hd_kumaraswamy) March 20, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X