ಕೇರಳದಲ್ಲಿ ಕೊಲೆಯತ್ನ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಕಡಬ, ಮಾ.20. ಕೇರಳದಲ್ಲಿ ಕೊಲೆಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಊರವರ ಸಹಕಾರದೊಂದಿಗೆ ಕೇರಳ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು ಗುರುತಿಸಲಾಗಿದೆ.
ಆರೋಪಿಯ ವಿರುದ್ಧ ಕೊಲ್ಲಂ ಠಾಣೆ ವ್ಯಾಪ್ತಿಯಲ್ಲಿ 307 ಕೇಸು ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಡುಪು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರ ಕಡಬಕ್ಕೆ ಆಗಮಿಸಿದ ಕೇರಳದ ಕೊಲ್ಲಂ ಠಾಣೆ ಎಸ್ಐ ಶಾನ್ವಾಝ್ ಹಾಗೂ ಸಿಬ್ಬಂದಿ, ಕಡಬ ಠಾಣೆ ಹೆಡ್ ಕಾನ್ಸ್‌ಟೇಬಲ್ ಹರೀಶ್ ಹಾಗೂ ಕಾನ್ಸ್‌ಟೇಬಲ್ ಭವಿತ್ ಮತ್ತು ಊರವರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ.
Next Story





