ಕಾಸರಗೋಡು ಜಿಲ್ಲೆಯಲ್ಲಿ ಇಂದು ಆರು ಹೊಸ ಕೊರೋನ ಸೋಂಕು ಪತ್ತೆ

ಕಾಸರಗೋಡು : ಕೊರೋನ ಸೋಂಕು ಜಿಲ್ಲೆಯ ಜನತೆಯಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೋನ ಸೋಂಕು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪೀಡಿತರ ಸಂಖ್ಯೆ ಒಂಭತ್ತಕ್ಕೇರಿದೆ.
ಸೋಂಕು ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಸರಕಾರಿ ಕಚೇರಿಗಳನ್ನು ಬಂದ್ ಮಾಡಲಾಗುವುದು. ಆರಾಧನಾಲಯಗಳಿಗೂ ಬಂದ್ ಅನ್ವಯವಾಗಲಿದೆ.
ಅಂಗಡಿ ಮುಂಗಟ್ಟುಗಳನ್ನು ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ತನಕ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಕ್ಲಬ್ ಗಳನ್ನು ಒಂದು ವಾರಗಳ ಕಾಲ ಮುಚ್ಚಬೇಕು. ವಿವಾಹ ಸೇರಿದಂತೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ.
Next Story





