Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಸರಕಾರಿ ಸೇವೆ ಸ್ಥಗಿತ-ಜನಸಂಚಾರ...

ಮಂಗಳೂರು: ಸರಕಾರಿ ಸೇವೆ ಸ್ಥಗಿತ-ಜನಸಂಚಾರ ವಿರಳ

​ಕೊರೋನ ವೈರಸ್ ಹರಡುವ ಭೀತಿ

ವಾರ್ತಾಭಾರತಿವಾರ್ತಾಭಾರತಿ20 March 2020 8:41 PM IST
share

ಮಂಗಳೂರು, ಮಾ.20: ಕೊರೋನ ವೈರಸ್ ಭೀತಿಯಿಂದ ತತ್ತರಿಸಿರುವ ಜನತೆಯ ಸುರಕ್ಷತೆಯ ಹಿನ್ನಲೆಯಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ಮುನ್ನೆಚ್ಚರಿಕೆಗೆ ಅನುಗುಣವಾಗಿ ಶುಕ್ರವಾರ ನಗರದಲ್ಲಿರುವ ಬಹುತೇಕ ಸರಕಾರಿ ಕಚೇರಿಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಇದರ ಅರಿವಿಲ್ಲದೆ ಕಚೇರಿಗಳಿಗೆ ತೆರಳಿದ ಸಾರ್ವಜನಿಕರು ವಾಪಸ್ ಆಗುತ್ತಿದ್ದ ದೃಶ್ಯ ಕಂಡುಬಂತು.

ನಗರದ ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಮನಪಾ, ಜಿಪಂ ಕಚೇರಿಗಳು ಎಂದಿನಂತೆ ತೆರೆದಿದ್ದರೂ ಕೂಡ ಭೂಮಿ ನೋಂದಣಿ, ಆಧಾರ್ ಇತ್ಯಾದಿ ಅನೇಕ ಸೇವೆಗಳನ್ನು ಕೊರೋನ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಗಿತಗೊಳಿಸಲಾಗಿದೆ. ತುರ್ತು ಸೇವೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಪಾಲಿಕೆ ಪ್ರವೇಶ ನಿರ್ಬಂಧ: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ‘ಕೊರೋನ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಜಿಲ್ಲಾಧಿಕಾರಿ ಆದೇಶದಂತೆ ಮಾ.31ರವರೆಗೆ ಪ್ರವೇಶ ನಿಷೇಧಿಸಲಾಗಿದೆ’ ಎಂಬ ಫಲಕವನ್ನು ಪಾಲಿಕೆ ಪ್ರವೇಶದ್ವಾರದಲ್ಲಿ ಅಳವಡಿಸಲಾಗಿದೆ.

ಜನನ ಮರಣ ನೋಂದಣಿ, ಉದ್ದಿಮೆ ಪರವಾನಗಿ ಅರ್ಜಿಗಳನ್ನು ಹಾಕಲು ಹೊರಭಾಗದಲ್ಲಿ ಡಬ್ಬಗಳನ್ನು ಇಡಲಾಗಿದೆ. ಉಳಿದ ತುರ್ತು ಸೇವೆ ಒದಗಿಸಲು ಪಾಲಿಕೆ ಸಿಬ್ಬಂದಿ ಹೊರಗಡೆ ಮೇಜು- ಕುರ್ಚಿಯನ್ನಿಟ್ಟು ಕಾರ್ಯನಿರ್ವಹಿಸುತ್ತಿದ್ದರು.

ಜನಸಂಚಾರ ವಿರಳ: ನಗರದ ವಿವಿಧ ಮಾಲ್, ಶಾಲೆ ಮತ್ತು ಕಾಲೇಜುಗಳು, ಮದುವೆ ಮತ್ತಿತರ ಖಾಸಗಿ ಕಾರ್ಯಕ್ರಮಗಳೆಲ್ಲವೂ ಬಂದ್ ಆಗಿದೆ. ಜನಸಂಚಾರ ಕೂಡ ವಿರಳವಾಗಿದೆ. ಬ್ಯಾಂಕ್‌ಗಳು, ಬಸ್ಸು-ರೈಲು ನಿಲ್ದಾಣಗಳು, ಮಾರುಕಟ್ಟೆ ಪ್ರದೇಶಗಳಲ್ಲಿ ಜನರ ಸಂಖ್ಯೆ ಎಂದಿನಂತಿರಲಿಲ್ಲ. ಗ್ರಾಮಾಂತರ ಪ್ರದೇಶದ ಕೆಲವು ಖಾಸಗಿ ಬಸ್‌ಗಳ ಸಂಚಾರವೂ ಸ್ಥಗಿತಗೊಳಿಸಲಾಗಿದೆ.

ರಾಜ್ಯದಲ್ಲಿ ನಿರ್ಬಂಧ ಹೇರಿ ಒಂದು ವಾರ ಕಳೆದಿದೆ. ಜನ ಸಂಚಾರ ಮತ್ತು ವಾಹನ ಸಂಚಾರ ವಿರಳವಾದ ಕಾರಣ ಮಂಗಳೂರು ಟ್ರಾಫಿಕ್ ಜಾಮ್‌ನಿಂದ ಮುಕ್ತವಾಗಿದೆ. ಈ ಮಧ್ಯೆ ಅಂಗಡಿ-ಮಳಿಗೆಗಳು, ಬೀದಿ ಬದಿಯ ವ್ಯಾಪಾರದಲ್ಲಿ ಕುಸಿತ ಕಂಡು ಬಂದಿದೆ. ಇನ್ನೊಂದೆಡೆ ಜನಸಾಮಾನ್ಯರು ಆಹಾರ ಸಾಮಗ್ರಿಗಳನ್ನು ಅಧಿಕ ಪ್ರಮಾಣದಲ್ಲಿ ಖರೀದಿಸುವ ಭರಾಟೆಯೂ ಹೆಚ್ಚುತ್ತಿವೆ. ಆಹಾರ ಸಾಮಗ್ರಿಗಳಲ್ಲದೆ ಅಡುಗೆ ಅನಿಲ, ಡೀಸೆಲ್-ಪೆಟ್ರೋಲ್ ಇತ್ಯಾದಿಯ ಕೊರತೆಯಾದೀತು ಎಂಬ ಆತಂಕದಲ್ಲಿ ಗ್ರಾಹಕರು ಅವುಗಳನ್ನು ಖರೀದಿಸುತ್ತಿದ್ದಾರೆ.

ಗಡಿಭಾಗದಲ್ಲಿ ನಿರ್ಲಕ್ಷ ? : ಕಾಸರಗೋಡಿನಲ್ಲಿ ಕೊರೋನ ಸೋಂಕು ಪ್ರಕರಣ ಕಂಡು ಬಂದ ಹಿನ್ನಲೆಯಲ್ಲಿ ಗಡಿಭಾಗದಲ್ಲಿ ಅದರಲ್ಲೂ ರಾ.ಹೆ.66ರ ತಲಪಾಡಿಯಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತದೆ. ಅನಗತ್ಯವಾಗಿ ಗಡಿದಾಟಿ ಹೋಗದಂತೆ ಮುನ್ಸೂಚನೆ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ಗಡಿಭಾಗದಲ್ಲಿ ಉಭಯ ಜಿಲ್ಲೆಗಳ ಜಿಲ್ಲಾಡಳಿತ ವಹಿಸಿಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಅತ್ತಿಂದಿತ್ತ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕನ ಸ್ಕ್ರೀನಿಂಗ್ ಮಾಡಬೇಕು. ಆದರೆ, ಜಿಲ್ಲಾಡಳಿತ ಇನ್ನೂ ಆ ಕ್ರಮ ಕೈಗೊಂಡಿಲ್ಲ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತ್ರ ಸ್ಕ್ರೀನಿಂಗ್ ಮಾಡಿದರೆ ಸಾಲದು. ಕಾಸರಗೋಡಿನಲ್ಲಿ ಕೊರೋನ ವೈರಸ್ ಪತ್ತೆ ಪ್ರಕರಣ ದೃಢಗೊಂಡ ಕಾರಣ ಗಡಿಭಾಗದಲ್ಲಿ ಕೂಡ ಸ್ಕ್ರೀನಿಂಗ್ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X