Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಬಾವುಟವೆ ನನ್ನ ಧರ್ಮ:...

ಕಾಂಗ್ರೆಸ್ ಬಾವುಟವೆ ನನ್ನ ಧರ್ಮ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 March 2020 10:30 PM IST
share
ಕಾಂಗ್ರೆಸ್ ಬಾವುಟವೆ ನನ್ನ ಧರ್ಮ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ.20: ಕಾಂಗ್ರೆಸ್ ಪಕ್ಷವನ್ನು ಕಟ್ಟಿ, ಗಟ್ಟಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದವರಿಗೆ ಅಧಿಕಾರ ತಾನಾಗಿಯೆ ಹುಡುಕಿಕೊಂಡು ಬರುತ್ತದೆ. ನೀವು ಅಧಿಕಾರದ ಹಿಂದೆ ಹೋಗುವ ಅಗತ್ಯವೆ ಇರುವುದಿಲ್ಲ. ಪಕ್ಷದಲ್ಲಿ ಶ್ರಮಕ್ಕೆ ಮಾತ್ರ ಬೆಲೆ ಇದೆಯೆ ಹೊರತು ಪ್ರಭಾವಕ್ಕೆ ನಾನು ಮಣಿಯುವುದಿಲ್ಲ. ಎಲ್ಲರನ್ನು ಒಟ್ಟಿಗೆ ಕೆರೆದುಕೊಂಡು ಹೋಗುವ ಸಂಕಲ್ಪ ನನ್ನದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುಮಾರು ಆರು ತಾಸುಗಳ ಸುದೀರ್ಘ ಕಾಲ ಮಾಜಿ ಉಪಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಮಾಜಿ ಕಾರ್ಯದರ್ಶಿಗಳು, ಖಜಾಂಚಿಗಳು, ಸಮನ್ವಯಕಾರರ ಜತೆ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ನನಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ. ಇಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ಎಲ್ಲರೂ ಸಮಾನರೆ. ನನಗೆ ಮತ್ತು ಕಾರ್ಯಾಧ್ಯಕ್ಷರಿಗೆ ಪಕ್ಷ ಅಧಿಕಾರ ಕೊಟ್ಟಿಲ್ಲ, ಜವಾಬ್ದಾರಿ ಕೊಟ್ಟಿದೆ. ಅದನ್ನು ಸಮರ್ಥವಾಗಿ ನಿಭಾಯಿಸಲು ನಿಮ್ಮೆಲ್ಲರ ಸಹಕಾರ, ಕಾರ್ಯನಿಷ್ಠೆ ಹಾಗೂ ಬದ್ಧತೆ ಬಹಳ ಮುಖ್ಯ ಎಂದು ಶಿವಕುಮಾರ್ ಹೇಳಿದರು.

ಕಾರ್ಯಕರ್ತರಿಲ್ಲದೆ ನಾಯಕರೂ ಗಟ್ಟಿಯಾಗುವುದಿಲ್ಲ, ಪಕ್ಷವೂ ಗಟ್ಟಿಯಾಗುವುದಿಲ್ಲ. ಕಾರ್ಯಕರ್ತರಿದ್ದರೆ ಮಾತ್ರ ಎಲ್ಲರಿಗೂ ಶಕ್ತಿ ಬರುತ್ತದೆ. ಹೀಗಾಗಿ ಇಲ್ಲಿ ಕಾರ್ಯಕರ್ತರು ಹಾಗೂ ನಾಯಕರು ಸಮಾನ ಭಾವದಿಂದ ದುಡಿಯುವ ಅವಶ್ಯಕತೆ ಇದೆ. ನಮ್ಮ ಸಾಮರ್ಥ್ಯ ಮತ್ತು ಶಕ್ತಿಯನ್ನು ಬಿಜೆಪಿ ವಿರುದ್ಧ ಹೋರಾಡಲು, ಪಕ್ಷವನ್ನು ಕಟ್ಟುವುದಕ್ಕಾಗಿ ವಿನಿಯೋಗವಾಗಬೇಕು. ಆ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಅವರು ಕರೆ ನೀಡಿದರು.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ.ವೇಣುಗೋಪಾಲ್ ನಿಮ್ಮೆಲ್ಲರ ಭಾವನೆ ಮತ್ತು ಅಭಿಪ್ರಾಯ ಕ್ರೋಡೀಕರಿಸಿ ನನಗೆ ಈ ಜವಾಬ್ದಾರಿ ವಹಿಸಿದ್ದಾರೆ. ನಿಮ್ಮ ಹಾಗೂ ಕಾರ್ಯಕರ್ತರ ಪರವಾಗಿ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದಲ್ಲಿ ಈ ಹಿಂದೆ ಏನಾಗಿದೆ ಎಂಬುದರ ಬಗ್ಗೆ ಪೋಸ್ಟ್ ಮಾರ್ಟಂ ಬೇಡ. ಮುಂದೇನಾಗಬೇಕು ಎಂಬುದರ ಬಗ್ಗೆ ಗಮನ ಹರಿಸೋಣ ಎಂದು ಶಿವಕುಮಾರ್ ಹೇಳಿದರು.

ನಾವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿಕೊಳ್ಳಬೇಕು. ಆಗ ಮಾತ್ರ ನಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಸಾಧ್ಯ. ನನಗೆ ಯಾವುದೆ ಒಂದು ಜಾತಿ, ಗುಂಪು, ಧರ್ಮದ ಮೇಲೆ ನಂಬಿಕೆ ಇಲ್ಲ. ಎಲ್ಲರೂ ಸಮಾನರೆ. ಹಿಂದೆ ರಾಹುಲ್ ಗಾಂಧಿ ರಾಷ್ಟ್ರ ಧ್ವಜವೆ ನನ್ನ ಧರ್ಮ ಎಂದಿದ್ದರು. ಅದೇ ರೀತಿ ಕಾಂಗ್ರೆಸ್ ಬಾವುಟವೆ ನನ್ನ ಧರ್ಮ. ಪಕ್ಷ ಗಟ್ಟಿಗೊಳಿಸಲು ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ತೆಗೆದುಕೊಂಡು ಹೋಗುತ್ತೇನೆ. ಇದಕ್ಕೆ ನೀವೂ ಕೈಜೋಡಿಸಬೇಕು ಎಂದು ಅವರು ಕೋರಿದರು. ಪಕ್ಷದಲ್ಲಿ 20-30 ವರ್ಷಗಳ ಕಾಲ ಕೆಲಸ ಮಾಡಿದ ಹಿರಿಯ ನಾಯಕರಿದ್ದಾರೆ. ಅವರ ಹಿರಿತನ, ಅನುಭವ, ಸಲಹೆಗಳನ್ನು ನಾವು ಮುಕ್ತವಾಗಿ ಸ್ವೀಕರಿಸಬೇಕು. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಮಾತ್ರ ಆದ್ಯತೆ ಎಂದು ಶಿವಕುಮಾರ್ ಹೇಳಿದರು. ನೀವು ನನ್ನ ಬೆಂಬಲಿಗರಾಗಿ, ನನ್ನ ಪರ ಮಾಡಿ, ಜೈಕಾರ ಹಾಕುವುದನ್ನು ನಾನು ಬಯಸುವುದಿಲ್ಲ. ಬದಲಿಗೆ ನನ್ನ ಸಹಪಾಠಿಗಳಾಗಿ ಕೆಲಸ ಮಾಡಿ. ಕಾಂಗ್ರೆಸ್ ಬಾವುಟಕ್ಕೆ ಜೈಕಾರ ಹಾಕಿ. ಪಕ್ಷವನ್ನು ಬೇರು ಮಟ್ಟದಿಂದ ಬಲಗೊಳಿಸಿ, ಮತ್ತೆ ಅಧಿಕಾರಕ್ಕೆ ತರುವತ್ತ ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಮ್ ಅಹಮದ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X