ಅಡುಗೆ ಅನಿಲ ಟ್ಯಾಂಕರ್ ಪಲ್ಟಿ: ಚಾಲಕ ಗಂಭೀರ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಲಾವತ್ತಡ್ಕ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಡುಗೆ ಅನಿಲ ಸಾಗಾಟದ ಟ್ಯಾಂಕರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿಬಿದ್ದ ಪರಿಣಾಮ ಟ್ಯಾಂಕರ್ ಚಾಲಕ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಶರವಣ ಗಾಯಗೊಂಡವರು. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಬೆಂಗಳೂರಿನತ್ತ ಅಡುಗೆ ಅನಿಲವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಲಾವತ್ತಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅದೃಷ್ಠಾವಶಾತ್ ಅಪಘಾತಕ್ಕೀಡಾದ ಟ್ಯಾಂಕರ್ ನಿಂದ ಯಾವುದೇ ರೀತಿಯಲ್ಲಿ ಅನಿಲ ಸೋರಿಕೆಯುಂಟಾಗದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಹಾಗೂ ಹೆದ್ದಾರಿಯ ಒಂದು ಬದಿಗೆ ಟ್ಯಾಂಕರ್ ಮಗುಚಿ ಬಿದ್ದ ಕಾರಣ ಹೆದ್ದಾರಿ ಸಂಚಾರಕ್ಕೆ ಯಾವುದೇ ಅಡೆತಡೆಯುಂಟಾಗಲಿಲ್ಲ.
ಉಪ್ಪಿನಂಗಡಿ ಪೊಲೀಸರು ಹಾಗೂ ನೆಲ್ಯಾಡಿ ಹೊರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡರು.
Next Story





