ಕೊರೋನ ಎಫೆಕ್ಟ್: ಮಾ.31ರವರೆಗೆ ಮೈಸೂರು ಅರಮನೆ ಬಂದ್

ಮೈಸೂರು,ಮಾ.20: ಕೊರೋನಾ ವೈರಾಣು ಹರಡುವುದನ್ನು ತಡೆಯಲು ಮಾ.31 ರವರೆಗೆ ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧವನ್ನು ವಿಸ್ತರಿಸಲಾಗಿದೆ.
ಕೊರೋನಾ ವೈರಸ್ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 15 ರಿಂದ 22 ವರಗೆ ಮೈಸೂರು ಅರಮನೆ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಕೊರೋನಾ ಸೋಂಕಿನ ಭೀತಿ ಹೆಚ್ಚಾಗುತ್ತಿರೋದರಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಮಾ.31 ರವರೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ದೇಶ-ವಿದೇಶಗಳಿಂದ ಹಾಗೂ ಅಕ್ಕಪಕ್ಕದ ರಾಜ್ಯಗಳಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು ಅರಮನೆ ಭೇಟಿ ನೀಡುತ್ತಾರೆ. ಆದರೆ, ದೇಶಾದ್ಯಂತ ಕೊರೋನಾ ಹರಡುತ್ತಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
Next Story





