ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿ ಗಂಭೀರ
ಮಡಿಕೇರಿ, ಮಾ.21: ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಯಮುಡಿಯ ಕಲ್ತೋಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಎರವರ ಕವಾಲ ಎಂಬವರು ರಾತ್ರಿ ವೇಳೆ ಮನೆಗೆ ತೆರಳುವ ಸಂದರ್ಭ ಕಾಡಾನೆ ದಾಳಿ ನಡೆಸಿ ಕಾಲಿಗೆ ತುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story