ಸ್ಕ್ರಿನಿಂಗ್ ವೇಳೆ ಜ್ವರ ಕೆಮ್ಮು ಪತ್ತೆ: ಓರ್ವ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ, ಮಾ.22: ರೈಲ್ವೆ ನಿಲ್ದಾಣದಲ್ಲಿ ಸ್ಕ್ರಿನಿಂಗ್ ವೇಳೆ ಜ್ವರ ಕೆಮ್ಮು ಕಂಡುಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವನನ್ನು ಹುಬ್ಬಳ್ಳಿ ರೈಲ್ವೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೈಲ್ವೆ ಇಲಾಖೆಯ ಸಿಬ್ಬಂದಿಯಾಗಿರುವ ಇವರು ಮೈಸೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದು, ರೈಲ್ವೆ ಕ್ಲೀನಿಂಗ್ ವಿಭಾಗದ ಉದ್ಯೋಗಿಯಾಗಿದ್ದ ಇವರು ಕರ್ತವ್ಯದ ನಿಮಿತ್ತ ಮೈಸೂರಿಗೆ ತೆರಳಿದ್ದರು. ರೈಲ್ವೆ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡುವ ವೇಳೆ ಶಂಕೆ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರೈಲ್ವೆ ಆಸ್ಪತ್ರೆ ಸಿಬ್ಬಂದಿ ರವಾನಿಸಿದ್ದು, ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Next Story





