Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕೊರೊನಾ ವೈರಸ್ 2ನೆ ಮಹಾಯುದ್ಧಕ್ಕಿಂತ...

‘ಕೊರೊನಾ ವೈರಸ್ 2ನೆ ಮಹಾಯುದ್ಧಕ್ಕಿಂತ ಭೀಕರ’: ಜಾಗತಿಕ ಉದ್ಯಮಕ್ಕೆ ಭಾರೀ ಹೊಡೆತ

ವಾರ್ತಾಭಾರತಿವಾರ್ತಾಭಾರತಿ22 March 2020 10:01 PM IST
share
‘ಕೊರೊನಾ ವೈರಸ್ 2ನೆ ಮಹಾಯುದ್ಧಕ್ಕಿಂತ ಭೀಕರ’: ಜಾಗತಿಕ ಉದ್ಯಮಕ್ಕೆ ಭಾರೀ ಹೊಡೆತ

ಹೊಸದಿಲ್ಲಿ,ಮಾ.22: ಜಗತ್ತಿನೆಲ್ಲೆಡೆ ತಾಂಡವವಾಡುತ್ತಿರುವ ಕೊರೋನವೈರಸ್ ಪಿಡುಗು ಆರ್ಥಿಕತೆಗೆ ಭಾರೀ ಹಿನ್ನಡೆಯುಂಟು ಮಾಡಿದೆ. ಎಲ್ಲ ಕ್ಷೇತ್ರಗಳಂತೆ ಪ್ರವಾಸೋದ್ಯಮ ಕ್ಷೇತ್ರಕ್ಕೂ ಭಾರೀ ಹೊಡೆತ ಬಿದ್ದಿದೆ. ಕೊರೋನವೈರಸ್ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವದ ಹಲವೆಡೆ ಸರಣಿ ಐಷಾರಾಮಿ ಹೋಟೆಲ್‌ಗಳನ್ನು ಹೊಂದಿರುವ ಮ್ಯಾರಿಯಟ್ ಇಂಟರ್‌ನ್ಯಾಷನಲ್‌ನ ಸಿಇಒ ಅರ್ನ್ ಸೊರೆನ್ಸನ್ ಅವರು ಕೊರೋನವೈರಸ್ ಪಿಡುಗು ಹೋಟೆಲ್ ಉದ್ಯಮದ ಮೇಲೆ ‘ಗ್ರೇಟ್ ಡಿಪ್ರೆಷನ್’ ಮತ್ತು ದ್ವಿತೀಯ ವಿಶ್ವಯುದ್ಧಕ್ಕಿಂತ ತೀವ್ರ ಪರಿಣಾಮಗಳನ್ನು ಬೀರಿದೆ ಎಂದು ಹೇಳಿದ್ದಾರೆ.

1929-33ರ ಅವಧಿಯಲ್ಲಿ ವಿಶ್ವವು ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಆರ್ಥಿಕ ಹಿಂಜರಿತಕ್ಕೆ ಗುರಿಯಾಗಿದ್ದು,ಇದು ‘ಗ್ರೇಟ್ ಡಿಪ್ರೆಷನ್’ಎಂದೇ ಹೆಸರಾಗಿದೆ.

ಕಂಪನಿಯ ಉದ್ಯೋಗಿಗಳಿಗೆ ರವಾನಿಸಿರುವ ಭಾವನಾತ್ಮಕ ವೀಡಿಯೊ ಸಂದೇಶದಲ್ಲಿ ಸೊರೆನ್ಸನ್,‘ಆದಾಯದಲ್ಲಿ ಶೇ.25ರಷ್ಟು ಕುಸಿತವಾಗಿರುವ ಪ್ರಸಕ್ತ ಹಣಕಾಸು ಸ್ಥಿತಿಯು ಕಂಪನಿಯ ಅತ್ಯಂತ ಕೆಟ್ಟ ತ್ರೈಮಾಸಿಕಕ್ಕಿಂತ ಹೆಚ್ಚು ಕೆಟ್ಟದ್ದಾಗಿದೆ. ನಮ್ಮ ಉದ್ಯಮಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಕೋವಿಡ್-19ರಂತಹ ಅಪಾಯವನ್ನು ನಾವು ಹಿಂದೆಂದೂ ಕಂಡಿರಲಿಲ್ಲ ’ಎಂದಿದ್ದಾರೆ.

ಜಗತ್ತಿನ ವಿವಿಧ ದೇಶಗಳಲ್ಲಿ ಹರಡಿಕೊಂಡಿರುವ ಮ್ಯಾರಿಯಟ್ ಹೋಟೆಲ್‌ಗಳಲ್ಲಿ ವ್ಯವಹಾರ ಮಾಮೂಲು ಪ್ರಮಾಣದ ಶೇ.75ಕ್ಕೆ ಕುಸಿದಿದೆ ಎಂದಿದ್ದಾರೆ.

ಕಂಪನಿಯು ಸಾವಿರಾರು ಉದ್ಯೋಗಿಗಳನ್ನು ರಜೆಯಲ್ಲಿ ಕಳುಹಿಸಿದೆ,ಎಲ್ಲ ಅನಗತ್ಯ ಪ್ರಯಾಣಗಳು ಮತ್ತು ನೇಮಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದಿರುವ ಸೊರೆನ್ಸನ್,ಈ ವರ್ಷದ ಉಳಿದ ಅವಧಿಗೆ ತಾನು ವೇತನವನ್ನು ಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಕಂಪನಿಯ ಕಾರ್ಯಾಧ್ಯಕ್ಷ ಬಿಲ್ ಮ್ಯಾರಿಯಟ್ ಜ್ಯೂನಿಯರ್ ಅವರೂ ವೇತನವನ್ನು ಪಡೆಯುವುದಿಲ್ಲ ಎಂದು ಈ ಮೊದಲೇ ಘೋಷಿಸಿದ್ದು,ಹಿರಿಯ ಅಧಿಕಾರಿಗಳು ಶೇ.50ರಷ್ಟು ವೇತನಗಳನ್ನು ಮಾತ್ರ ಪಡೆಯಲಿದ್ದಾರೆ.

 ಭಾರತದ ಅತ್ಯಂತ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ಸಿಬ್ಬಂದಿಗಳಿಗೆ ಶೇ.25ರಷ್ಟು ವೇತನ ಕಡಿತಗೊಳಿಸುವುದಾಗಿ ಶನಿವಾರ ಪ್ರಕಟಿಸಿತ್ತು. ಬ್ರಿಟಿಷ್ ಏರ್‌ವೇಸ್‌ನ ಪೈಲಟ್‌ಗಳು ಎಪ್ರಿಲ್ ಮತ್ತು ಮೇ ತಿಂಗಳುಗಳಿಗೆ ತಮ್ಮ ಮೂಲವೇತನದ ಶೇ.50ರಷ್ಟನ್ನು ಮಾತ್ರ ಪಡೆಯಲಿದ್ದಾರೆ. ಲಾಕ್‌ಡೌನ್‌ಗಳು ಮತ್ತು ಪ್ರವಾಸಿ ವೀಸಾಗಳ ಅಮಾನತಿನಿಂದಾಗಿ ವಿಮಾನಯಾನಗಳು ಹೆಚ್ಚುಕಡಿಮೆ ಸ್ಥಗಿತಗೊಂಡಿರುವ ಹಿನ್ನೆೆಲೆಯಲ್ಲಿ ವಾಯುಯಾನ ಕ್ಷೇತ್ರದ ಹಲವಾರು ಹಿರಿಯ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ತಮ್ಮ ವೇತನದಲ್ಲಿ ಕಡಿತಗಳಿಗೆ ಒಪ್ಪಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X