Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಂಗಳೂರಿಗೆ ಬಂದಿದ್ದ ಕಾಸರಗೋಡಿನ ಸೋಂಕಿತ...

​ಮಂಗಳೂರಿಗೆ ಬಂದಿದ್ದ ಕಾಸರಗೋಡಿನ ಸೋಂಕಿತ ವ್ಯಕ್ತಿ ?

ವಾರ್ತಾಭಾರತಿವಾರ್ತಾಭಾರತಿ23 March 2020 10:35 PM IST
share
​ಮಂಗಳೂರಿಗೆ ಬಂದಿದ್ದ ಕಾಸರಗೋಡಿನ ಸೋಂಕಿತ ವ್ಯಕ್ತಿ ?

ಮಂಗಳೂರು, ಮಾ.23: ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಸೋಂಕಿತ ಯುವಕನೊಂದಿಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿರುವ ಬೆನ್ನಿಗೆ ಕಾಸರಗೋಡಿನ ಸೋಂಕಿತ ವ್ಯಕ್ತಿಯೊಬ್ಬರು ಮಂಗಳೂರಿಗೆ ಎರಡು ಬಾರಿ ಬಂದದ್ದಲ್ಲದೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸಿರುವುದು ಬೆಳಕಿಗೆ ಬಂದಿದೆ.

ಕಾಸರಗೋಡಿನ ಸುಮಾರು 54 ವರ್ಷ ವಯಸ್ಸಿನ ವ್ಯಕ್ತಿಗೆ ಸೋಂಕು ದೃಢಪಟ್ಟ ಬೆನ್ನಲ್ಲೇ ಕೇರಳ ಸರಕಾರವು ಆತ ಸಂಚರಿಸಿದ ರೂಟ್ ಮ್ಯಾಪ್ ಬಿಡುಗಡೆಗೊಳಿಸಿದೆ. ಅಲ್ಲದೆ ಆತ ಸಂಚರಿಸಿದ ಮಾರ್ಗಗಳಲ್ಲಿನ ಸಾರ್ವಜನಿಕರು ತಕ್ಷಣ ಆರೋಗ್ಯ ಇಲಾಖೆಗೆ ಸ್ವಯಂ ಪ್ರೇರಣೆಯಿಂದ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಈ ವ್ಯಕ್ತಿಯು ಮಾ.10ರಂದು ಸಂಜೆ 5:30ರ ಏರ್‌ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅಲ್ಲಿಂದ ಸ್ವಂತ ವಾಹನದಲ್ಲಿ ಕಾಸರಗೋಡಿಗೆ ತೆರಳಿ ಅಲ್ಲಿ ಚಹಾ ಸೇವನೆ ಮಾಡಿ ರಾತ್ರಿ 7:30ಕ್ಕೆ ಮನೆಗೆ ತೆರಳಿದ್ದರು. ಮಾ.18ರಂದು ಸಂಜೆ 3 ಗಂಟೆಗೆ ನಗರದ ಅತ್ತಾವರದ ಕೆಎಂಸಿ ಆಸ್ಪತ್ರೆಗೆ ತೆರಳಿ ವೈದ್ಯರೊಬ್ಬರನ್ನು ಭೇಟಿಯಾಗಿದ್ದರು. ಬಳಿಕ ಕೆಎಂಸಿ ಕ್ಯಾಂಟೀನ್‌ಗೆ ಹೋಗಿ ಚಹಾ ಸೇವನೆ ಮಾಡಿದ್ದರು. ಅಲ್ಲಿಂದ ಆಟೋ ರಿಕ್ಷಾದಲ್ಲಿ ‘ಮೆಡಿಸಿಟಿ’ಗೆ ತೆರಳಿ ಔಷಧಿಗಳನ್ನು ಕೊಂಡು ಕಾಸರಗೋಡಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತೆರಳಿದ್ದರು.

ಮಾ.20ರಂದು ಈ ವ್ಯಕ್ತಿ ಮತ್ತೆ ಮಂಗಳೂರಿಗೆ ಆಗಮಿಸಿದ್ದರು. ಅಂದರೆ ಖಾಸಗಿ ವಾಹನದಲ್ಲಿ ನಗರಕ್ಕೆ ಬಂದು ವೈದ್ಯರನ್ನು ಭೇಟಿಯಾಗಿ ಅದೇ ವಾಹನದಲ್ಲಿ ವಾಪಸ್ ಕಾಸರಗೋಡಿಗೆ ತೆರಳಿದ್ದರು. ಈ ಸೋಂಕಿತ ವ್ಯಕ್ತಿ ಸಂಚರಿಸಿದ ವಿಮಾನ, ಬಸ್ಸುಗಳಲ್ಲಿನ ಪ್ರಯಾಣಿಕರು ಸ್ವಯಂ ಪ್ರೇರಣೆಯಿಂದ 104 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ.

ಕ್ವಾರಂಟೈನ್‌ನಲ್ಲಿ ವೈದ್ಯರು: ಸೋಂಕಿತ ವ್ಯಕ್ತಿ ಭೇಟಿಯಾದ ವೈದ್ಯರು ಇದೀಗ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ರವಿವಾರ ಒಂದು ಪ್ರಕರಣ ಹೊರತುಪಡಿಸಿದರೆ ಇದುವರೆಗೂ ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X