ಆರೋಗ್ಯ ಇಲಾಖೆ ಸಿಬ್ಬಂದಿಗೆ ಶ್ರೀಕೃಷ್ಣ ಮಠದಿಂದ ಊಟದ ವ್ಯವಸ್ಥೆ
ಉಡುಪಿ, ಮಾ.26: ಕೊರೋನ ನಿಯಂತ್ರಣ ಕುರಿತಂತೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಗುರುವಾರ ಅಪರಾಹ್ನ ಶ್ರೀಕೃಷ್ಣ ಮಠದಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 80 ಮಂದಿಗೆ ಊಟದ ವ್ಯವಸ್ಥೆ ಮಾಡಿದ್ದು, ಲಾಕ್‌ಡೌನ್ ಅವಧಿ ಮುಗಿಯುವವರೆಗೂ ಮಧ್ಯಾಹ್ನದ ಊಟ ಸರಬರಾಜು ಮಾಡುವುದಾಗಿ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ, ಮಠದ ಮೆನೇಜರ್ ಗೋವಿಂದರಾಜ್ ಭರವಸೆ ನೀಡಿದ್ದು, ಇದಕ್ಕಾಗಿ ಎಲ್ಲಾ ನೌಕರರ ಪರವಾಗಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
Next Story





