Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಇನ್ಫೋಸಿಸ್‌ನಿಂದ ದ.ಕ.ಜಿಲ್ಲೆಗೆ...

​ಇನ್ಫೋಸಿಸ್‌ನಿಂದ ದ.ಕ.ಜಿಲ್ಲೆಗೆ ವೈದ್ಯಕೀಯ ಸಾಮಗ್ರಿಗಳ ಪೂರೈಕೆ

ವಾರ್ತಾಭಾರತಿವಾರ್ತಾಭಾರತಿ28 March 2020 10:21 PM IST
share

ಮಂಗಳೂರು, ಮಾ.28: ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್‌ನ 7 ಪ್ರಕರಣಗಳು ದೃಢಗೊಳ್ಳುವುದರೊಂದಿಗೆ ಭೀತಿಯ ವಾತಾವರಣ ಸೃಷ್ಟಿಸಿದೆ. ಇದನ್ನು ಮನಗಂಡ ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಿ ನೆರವಿನ ಹಸ್ತ ಚಾಚಿದ್ದಾರೆ.

ರಾಜ್ಯದಲ್ಲಿ ಉಂಟಾದ ನೆರೆ ಪ್ರವಾಹ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಇನ್ಫೋಸಿಸ್ ಸಂಸ್ಥೆ ಸಮಾಜಕ್ಕೆ ನೆರವಿನ ಹಸ್ತ ಚಾಚುತ್ತಾ ಬಂದಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆಯು ಇದೀಗ ಕೊರೋನ ಚಿಕಿತ್ಸೆ ನಿರ್ವಹಣೆಗೆ ರಾಜ್ಯದ ಒಂದು ಆಸ್ಪತ್ರೆಯನ್ನು ತಮಗೆ ವಹಿಸಿ ಕೊಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದರು.

ದ.ಕ.ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ವೈದ್ಯಕೀಯ ಸಾಮಾಗ್ರಿಗಳ ನೆರವಿಗಾಗಿ ದ.ಕ. ಜಿಲ್ಲಾಡಳಿತದ ಪರವಾಗಿ ನಗರದ ಪೊಲೀಸ್ ಆಯುಕ್ತರು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಬಳಿ ನೆರವು ನೀಡುವಂತೆ ವಿನಂತಿಸಿಕೊಂಡಿದ್ದರು. ಅದರಂತೆ ಡಾ.ಸುಧಾಮೂರ್ತಿ ಪೊಲೀಸ್ ಇಲಾಖೆಯ ಕೋರಿಕೆಗೆ ಕೇವಲ 36 ಗಂಟೆಯೊಳಗೆ 28 ಲಕ್ಷ ರೂ. ಗಳ ತುರ್ತು ವೈದ್ಯಕೀಯ ಸಾಮಾಗ್ರಿಗಳನ್ನು ಜಿಲ್ಲೆಯ ಜನತೆಯ ನೆರವಿಗಾಗಿ ಕಳುಹಿಸಿದ್ದಾರೆ. ಇನ್ಫೋಸಿಸ್ ಫೌಂಡೇಶನ್‌ನ ರಾಮದಾಸ್ ಕಾಮತ್ ಹಾಗೂ ಅವರ ತಂಡ ಈ ನಿಟ್ಟಿನಲ್ಲಿ ಶ್ರಮಿಸಿದೆ ಎಂದು ಪೊಲೀಸ್ ಆಯುಕ್ತ ಹರ್ಷ ತಿಳಿಸಿದ್ದಾರೆ.

1,65,000 ಮಾಸ್ಕ್, 5,000 ಬಾಟಲ್ ಸ್ಯಾನಿಟೈಸರ್, 85 ಗಾಗಲ್ಸ್, 3 ಬ್ಲಾಕ್ ಸರ್ಜಿಕಲ್ ಗ್ಲೌಸ್, 50 ಕ್ಯಾಪ್‌ಗಳು, 30 ಪೂರ್ತಿ ಕಾಲು ಮುಚ್ಚುವಂತ ವೈದ್ಯಕೀಯ ವಸ್ತುಗಳು, 2,000 ಎನ್ 95 ಮಾಸ್ಕ್, 300 ಫಾಗ್ ಫ್ರೀ ಮಾಸ್ಕ್, 60 ವಿಶೇಷ ಮಾದರಿಯ ಸರ್ಜಿಕಲ್ ಗ್ಲೌಸ್ ಮೊದಲಾದ ವಸ್ತುಗಳನ್ನು ಕಳುಹಿಸಿದ್ದಾರೆ. ಕೊರೋನ ವಿರುದ್ಧ ಶ್ರಮಿಸುತ್ತಿರುವ ವೈದ್ಯರು, ನರ್ಸ್‌ಗಳು, ಪೊಲೀಸರು, ಆಶಾ ಕಾರ್ಯಕರ್ತೆ ಯರು ಹಾಗೂ ಸ್ವಯಂ ಸೇವಕರು ಈ ವಸ್ತುಗಳನ್ನು ಬಳಸಿಕೊಳ್ಳಲಿದ್ದಾರೆ. ಮೆಡಿಕಲ್‌ಗಳಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಸ್ಟಾಕ್ ಇಲ್ಲದೆ ಸಮಸ್ಯೆಯಾಗಿತ್ತು.

ಸಚಿವ, ಸಂಸದರಿಂದ ಕೃತಜ್ಞತೆ: ಜಿಲ್ಲೆಯ ಜನರಿಗೆ ತುರ್ತು ಸ್ಪಂದನೆ ನೀಡಿದ ಡಾ.ಸುಧಾಮೂರ್ತಿಹಾಗೂ ರಾಮದಾಸ್ ಕಾಮತ್ ಮತ್ತು ತಂಡಕ್ಕೆ ದ.ಕ.ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್. ಕೃತಜ್ಞತೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X