Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಕೊರೋನ ಪರಿಸ್ಥಿತಿ ನಿಯಂತ್ರಣ,...

'ಕೊರೋನ ಪರಿಸ್ಥಿತಿ ನಿಯಂತ್ರಣ, ನಿರ್ವಹಣೆಗೆ ಸರಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲವಿದೆ'

ಸರ್ವಪಕ್ಷ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ29 March 2020 3:45 PM IST
share
ಕೊರೋನ ಪರಿಸ್ಥಿತಿ ನಿಯಂತ್ರಣ, ನಿರ್ವಹಣೆಗೆ ಸರಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲವಿದೆ

ಬೆಂಗಳೂರು : ಕೊರೋನ ಪರಿಸ್ಥಿತಿ ನಿಯಂತ್ರಣ, ನಿರ್ವಹಣೆಗೆ ಸರಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಪಕ್ಷದ, ವೈಯಕ್ತಿಕವಾಗಿ ನನ್ನ ಬೆಂಬಲವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಅವರು ಮಾತನಾಡಿ ಈ ಬಗ್ಗೆ ಹೇಳಿದರು. ಬಹಳ ತಡವಾಗಿ ಆದರೂ ಸಿಎಂ ಯಡಿಯೂರಪ್ಪ ಅವರು ಸರ್ವಪಕ್ಷ ಸಭೆ ಕರೆದಿರುವುದು ಅಭಿನಂದನಾರ್ಹ. ಕೊರೋನ ವಿಚಾರದಲ್ಲಿ ನಾವು ರಾಜಕೀಯ ಮಾಡಲು ಹೋಗುವುದಿಲ್ಲ. ರಾಜಕೀಯ ಬೇರೆ. ಈ ನಾಡಿನ ಸಮಸ್ಯೆಯೇ ಬೇರೆ. ಒಂದಕ್ಕೊಂದು ಬೆರೆಸಲು ಹೋಗುವುದಿಲ್ಲ. ಕೊರೋನ ಪರಿಸ್ಥಿತಿ ನಿಯಂತ್ರಣ, ನಿರ್ವಹಣೆಗೆ ಸರಕಾರ ಕೈಗೊಳ್ಳುವ ಎಲ್ಲ ಸಕಾರಾತ್ಮಕ ಕ್ರಮಗಳಿಗೆ ನಮ್ಮ ಪಕ್ಷದ, ವೈಯಕ್ತಿಕವಾಗಿ ನನ್ನ ಬೆಂಬಲವಿದೆ ಎಂದು ಹೇಳಿದರು.

ಕೊರೋನ ನಿಯಂತ್ರಣ, ಪರಿಸ್ಥಿತಿ ನಿರ್ವಹಣೆಗೆ ಸರಕಾರದ ಕ್ರಮಗಳು ವಿಶ್ವ ಆರೋಗ್ಯ ಸಂಸ್ಥೆಯ (WHO) ನಿಯಮಗಳಿಗೆ, ಮಾರ್ಗಸೂಚಿಗಳಿಗೆ ಅನುಗುಣವಾಗಿ ಇರಬೇಕೇ ಹೊರತು ಸರಕಾರದ ಪ್ರತಿನಿಧಿಗಳ, ಯಾವುದೋ ರಾಜಕೀಯ ಪಕ್ಷದ ತತ್ವ, ಸಿದ್ಧಾಂತ, ರಾಜಕೀಯ ಲಾಭಕ್ಕೆ ಬಳಕೆ ಆಗಬಾರದು. ಕೊರೋನ ಇಡೀ ರಾಜ್ಯದ, ದೇಶದ, ವಿಶ್ವದ ಸಮಸ್ಯೆ. ಬರೀ ಆಡಳಿತರೂಢ ಸರಕಾರದ, ಪಕ್ಷದ ಸಮಸ್ಯೆ ಅಲ್ಲ. ಇದು ಎಲ್ಲರ ಸಮಸ್ಯೆ. ಎಲ್ಲರೂ ಒಗ್ಗೂಡಿ ಹೋರಾಡಬೇಕು. ಈ ವಿಚಾರದಲ್ಲಿ ಒಬ್ಬರು ಹೆಚ್ಚು, ಒಬ್ಬರು ಕಡಿಮೆ ಎಂಬುದಿಲ್ಲ. ಬಹಳ ಪ್ರಮುಖ ಹಾಗೂ ಆತಂಕಕಾರಿ ವಿಚಾರವೆಂದರೆ ಈ ಪಿಡುಗು ನಿವಾರಣೆ ವಿಚಾರದಲ್ಲಿ ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ, ಭಯ ಮೂಡಿಸುತ್ತಿದ್ದಾರೆ. ನಾನು ಅವರ ಹೆಸರು ಹೇಳಲು ಹೋಗುವುದಿಲ್ವ. ಆದರೆ ಅವರಲ್ಲಿ ಸಮನ್ವಯ ತರುವ ಜವಾಬ್ದಾರಿ ಸಿಎಂ ಆಗಿ ನಿಮ್ಮದು. ಇಲ್ಲದಿದ್ದರೆ ಜನ ಮತ್ತಷ್ಟು ಹೆದರಿ ಹೋಗುತ್ತಾರೆ ಎಂದು ಡಿಕೆಶಿ ಹೇಳಿದರು.

ಸಾಮಾನ್ಯ ಜನ, ಕೊರೋನ ಸೋಂಕು ನಿವಾರಣೆಗೆ ಹೋರಾಡುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಯಾರಿಗೂ ಮಾಸ್ಕ್ ಸಿಗುತ್ತಿಲ್ಲ. ಇದನ್ನು ಉಚಿತವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಕ್ಷಕರಿಗೇ ಸುರಕ್ಷೆ ಇಲ್ಲದಿದ್ದರೆ ಹೇಗೆ ? ದಿನನಿತ್ಯದ ವಸ್ತುಗಳು, ಆಹಾರ ಸಿಗದೆ ಜನ ಕಂಗಾಲಾಗಿದ್ದಾರೆ. ಇಲ್ಲಿ ಇರಲೂ ಆಗದೆ, ತಮ್ಮೂರಿಗೆ ಹೋಗಲು ಆಗದೆ ಪರಿತಪಿಸುತ್ತಿದ್ದಾರೆ. ಇದಕ್ಕೊಂದು ಸ್ಪಷ್ಟ ಪರಿಹಾರ ಕಲ್ಪಿಸಬೇಕು. ರೈತರು ಬೆಳೆದ ಬೆಳೆಗಳು ವಿಲೇವಾರಿ ಆಗುತ್ತಿಲ್ಲ. ರೇಷ್ಮೆ ಗೂಡುಗಳು ಮಾರಾಟವಾಗದೆ ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದಾರೆ. ಅವರು, ಇವರು ಎನ್ನದೇ ಎಲ್ಲ  ವರ್ಗದವರ ಸಂಕಷ್ಟಕ್ಕೆ ಪರಿಹಾರ ಸೂತ್ರಗಳನ್ನು ರೂಪಿಸಬೇಕು ಎಂದು ಶಿವಕುಮಾರ್ ಹೇಳಿದರು.

ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X