Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‍ಡೌನ್: ಚಿಕ್ಕಮಗಳೂರು ಜಿಲ್ಲಾದ್ಯಂತ...

ಲಾಕ್‍ಡೌನ್: ಚಿಕ್ಕಮಗಳೂರು ಜಿಲ್ಲಾದ್ಯಂತ ಸಾರ್ವಜನಿಕರಿಂದ ಕಟ್ಟುನಿಟ್ಟಿನಿಂದ ಆದೇಶ ಪಾಲನೆ

ಪೊಲೀಸರಿಂದ ಅನಾಥರಿಗೆ ಆಶ್ರಯ, ಊಟೋಪಚಾರ

ವಾರ್ತಾಭಾರತಿವಾರ್ತಾಭಾರತಿ29 March 2020 6:53 PM IST
share
ಲಾಕ್‍ಡೌನ್: ಚಿಕ್ಕಮಗಳೂರು ಜಿಲ್ಲಾದ್ಯಂತ ಸಾರ್ವಜನಿಕರಿಂದ ಕಟ್ಟುನಿಟ್ಟಿನಿಂದ ಆದೇಶ ಪಾಲನೆ

ಚಿಕ್ಕಮಗಳೂರು, ಮಾ.29: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆಯಿಂದ ಹೊರಬರದಂತೆ ಸರಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವುದರಿಂದ ಕಾಫಿನಾಡಿನ ಜನರು ಲಾಕ್‍ಡೌನ್‍ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ರವಿವಾರ ನಗರ ಸೇರಿದಂತೆ ಜಿಲ್ಲಾದ್ಯಂತ ಜನಸಂಚಾರ ಕಡಿಮೆ ಇತ್ತು. 

ರವಿವಾರದ ದಿನ ಪ್ರವಾಸಿಗರಿಂದ ಗಿಜುಗುಡುತ್ತಿದ್ದ ನಗರದ ಎಂ.ಜಿ.ರಸ್ತೆ, ಐ.ಜಿ.ರಸ್ತೆ, ಮಾರ್ಕೆಟ್ ರಸ್ತೆ, ಹನುಮಂತಪ್ಪ ವೃತ್ತ, ಆಜಾದ್ ಪಾರ್ಕ್ ವೃತ್ತ, ಕೆಎಸ್ಸಾರ್ಟಿಸಿ ಬಸ್‍ನಿಲ್ದಾಣ, ಎಐಟಿ ಕಾಲೇಜು ವೃತ್ತಗಳಲ್ಲಿ ಜನಸಂಚಾರವಿಲ್ಲದೇ ಸ್ಮಶಾನ ಮೌನ ಆವರಿಸಿದೆ. ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ಹೊರತುಪಡಿಸಿ ಸಾರ್ವಜನಿಕರ ಓಡಾಟ ಕಂಡುಬರಲೇ ಇಲ್ಲ. ವಾಹನಗಳ ಸುಳಿವೇ ಇರಲಿಲ್ಲ.

ಎಂದಿನಂತೆ ಅಗತ್ಯವಸ್ತುಗಳ ಅಂಗಡಿಗಳನ್ನು ರವಿವಾರವೂ ತೆರೆಯಲಾಗಿದ್ದು, ಎಲ್ಲೋ ಬೆರಳೆಣಿಕೆಯಷ್ಟು ಜನರು ಬೈಕ್, ಕಾರುಗಳಲ್ಲಿ ತೆರಳಿ ವಸ್ತುಗಳನ್ನು ಖರೀದಿಸಿದರು. ಮಾಂಸ, ಮೀನು ಮಾರ್ಕೆಟ್‍ನಲ್ಲಿ ಬೆಳಗ್ಗೆ ಒಂದಷ್ಟು ಜನರು ಹೊರತುಪಡಿಸಿದರೇ ಉಳಿದಂತೆ ಗ್ರಾಹಕರಿಲ್ಲದಿರುವುದು ಕಂಡು ಬಂತು. ಹೆಚ್ಚಿನ ಗ್ರಾಹಕರು ಮೀನು ಮಾರ್ಕೆಟ್‍ನಲ್ಲಿ ಕಂಡುಬಂದರಾdರೂ ಮೀನು ಧಾರಣೆ ಏರಿಕೆಯಾಗಿರುವುದು ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಮುಟ್ಟಿತ್ತು. ಇನ್ನು ಕೋಳಿ ಮಾಂಸ ಕೆಜಿಗೆ 100 ರೂ. ಇದ್ದು, ಗ್ರಾಹಕರು ಕೋಳಿ ಮಾಂಸ ಖರೀದಿಗೆ ಮುಂದಾಗುತ್ತಿಲ್ಲ. 

ದಿನಸಿ ಅಂಗಡಿ, ಹಣ್ಣು ತರಕಾರಿ ಅಂಗಡಿ, ಪೆಟ್ರೋಲ್ ಬಂಕ್, ಎಟಿಎಂ, ಕೃಷಿ ಔಷಧದ ಅಂಗಡಿಗಳು, ಮೆಡಿಕಲ್ ಶಾಪ್‍ಗಳು ಎಂದಿನಂತೆ ತೆರೆದಿದ್ದವು. ಆದರೆ ರವಿವಾರ ಆಗಿದ್ದರಿಂದ ಗ್ರಾಹಕರ ಸಂಖ್ಯೆ ವಿರಳವಾಗಿತ್ತು. ಸರಕು ಸಾಗಣೆ ವಾಹನಗಳ ಸಂಚಾರ ಎಂದಿನಂತೆ ಇತ್ತು. ಗ್ರಾಮೀಣ ಪ್ರದೇಶದ ರೈತರು ಬೆಳಗ್ಗೆಯೇ ಕೃಷಿ ಉತ್ಪನ್ನ ಮಾರುಕಟ್ಟೆಗೆ ಆಗಮಿಸಿ ತಾವು ತಂದ ತರಕಾರಿಯನ್ನು ಅಂತರ ಕಾಯ್ದುಕೊಂಡು ಮಾರಾಟ ಮಾಡಿ ಬೇಗ ಮನೆ ಸೇರುತ್ತಿದ್ದ ದೃಶ್ಯಗಳು ರವಿವಾರ ಕಂಡು ಬಂದವು.

ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಸಂಚಾರಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಚೆಕ್‍ಪೋಸ್ಟ್ ಗಳಲ್ಲಿ ಅನಗತ್ಯವಾಗಿ ತಿರುಗಾಡುವ ವಾಹನ ಸವಾರರನ್ನು ತಡೆದು ವಿಚಾರಿಸಿ ಬಿಡುತ್ತಿದ್ದ ದೃಶ್ಯಗಳು ಕಂಡು ಬಂದವು. ಅಗತ್ಯ ವಸ್ತುಗಳಿಗೆ ಜನರು ಮನೆಯಿಂದ ಹೊರಬರುವುದನ್ನು ತಪ್ಪಿಸುವ ಉದ್ದೇಶದಿಂದ ಕೆಲ ಸಂಘಸಂಸ್ಥೆ ಕಾರ್ಯಕರ್ತರು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ನಗರದ ಕೆಲ ಬಡಾವಣೆಗಳಲ್ಲಿ ಅಗತ್ಯವಸ್ತುಗಳನ್ನು ಪೂರೈಸುವ ಕೆಲಸವನ್ನು ರವಿವಾರ ಕೂಡ ಮಾಡಿದರು.

ಇದು ನಗರ ಪ್ರದೇಶ ಚಿತ್ರಣವಾದರೇ ಗ್ರಾಮೀಣ ಪ್ರದೇಶದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಅಗತ್ಯವಸ್ತುಗಳ ಖರೀದಿಗೆ ಮಾತ್ರ ಪಟ್ಟಣ ಪ್ರದೇಶಗಳಿಗೆ ಬಂದು ತಮ್ಮ ಊರುಗಳಿಗೆ ವಾಪಾಸ್ ಆಗುತ್ತಿದ್ದಾರೆ.

ಬಿಸಿಲಿನ ತಾಪಕ್ಕೆ ಹೈರಾಣಾಗುತ್ತಿರುವ ಪೊಲೀಸರು: ಕಳೆದ ರವಿವಾರ ಪ್ರಧಾನಿ ಕರೆ ನೀಡಿದ್ದ ಜನತಾ ಕಫ್ರ್ಯೂ ಘೋಷಣೆಯಾದ ದಿನದಿಂದ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಜಿಲ್ಲೆಯಾದ್ಯಂತ ಇರುವ ರಣಬಿಸಿಲಿನಿಂದಾಗಿ ಹೈರಣಾಗಿದ್ದಾರೆ. ರವಿವಾರ ನಗರದಲ್ಲಿ ಜನಸಂಚಾರ ಭಾರೀ ಕಡಿಮೆ ಇದ್ದು, ಚೆಕ್‍ಪೋಸ್ಟ್ ಗಳಲ್ಲಿ ಪ್ರಮುಖ ವೃತ್ತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಸುಡುವ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನೆರಳಿನ ಆಶ್ರಯಪಡೆದುಕೊಂಡಿದ್ದ ದೃಶ್ಯಗಳು ರವಿವಾರ ಕಂಡುಬಂದವು.

ಅನಾಥರು, ಬಿಕ್ಷುಕರಿಗೆ ಊಟ ಉಪಹಾರ ನೀಡುವ ಕೆಲಸವನ್ನು ಪೊಲೀಸ್ ಇಲಾಖೆ, ನಗರಸಭೆ ಹಾಗೂ ಕೆಲ ಸಂಘಸಂಸ್ಥೆಗಳು ಜಿಲ್ಲೆಯಲ್ಲಿ ಮಾಡುತ್ತಿದೆ. ಚಿಕ್ಕಮಗಳೂರು ನಗರದಲ್ಲಿ ಶನಿವಾರ ಇಂತಹ ಕೆಲವರಿಗೆ ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ಆಶ್ರಯ ನೀಡಿ ಊಟ, ಉಪಹಾರ ನೀಡಿದ್ದರೆ, ರವಿವಾರ ತರೀಕೆರೆ ಪಟ್ಟಣದಲ್ಲಿ ಅನಾಥರು, ನಿರ್ಗತಿಕರನ್ನು ಒಂದೆಡೆ ಸೇರಿಸಿರುವ ಪೊಲೀಸ್ ಇಲಾಖೆ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೂ ಆಶ್ರಯದೊಂದಿಗೆ ಊಟ ಉಪಚಾರ ನೀಡಲು ಮುಂದಾಗಿದ್ದಾರೆ.

ಕೊರೊನಾ ಭೀತಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಬರುವ ರೈತರ ಸಂಖ್ಯೆ ಗಣನೀಯವಾಗಿ ಕ್ಷೀಣಿಸಿದೆ. ಮಾರುಕಟ್ಟೆಗೆ ಬೆಳಗ್ಗೆ ಬಂದು ವ್ಯಾಪಾರ ವಹಿವಾಟು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾರೆ. ವ್ಯಾಪಾರ ನಡೆಸುವಾಗಲು ಅಂತರ ಕಾಪಾಡಿಕೊಂಡು ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ. ಸರಕು ಸಾಗಣೆ ಲಾರಿಗಳ ಸಂಚಾರಕ್ಕೆ ಅವಕಾಶ ನೀಡಿರುವುದು ಅನುಕೂಲವಾಗಿದೆ.
- ರವಿಕುಮಾರ್, ಎಪಿಎಂಸಿ ವರ್ತಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X