Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಸೋಂಕು ಹಳ್ಳಿಗಳಿಗೆ ಹೋಗದಂತೆ...

ಕೊರೋನ ಸೋಂಕು ಹಳ್ಳಿಗಳಿಗೆ ಹೋಗದಂತೆ ತಡೆಗಟ್ಟಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 March 2020 7:09 PM IST
share
ಕೊರೋನ ಸೋಂಕು ಹಳ್ಳಿಗಳಿಗೆ ಹೋಗದಂತೆ ತಡೆಗಟ್ಟಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ. 29: ರಾಜ್ಯದಲ್ಲಿ ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಕೊರೋನ ವೈರಸ್ ಸೋಂಕು ಹಳ್ಳಿಗಳಿಗೆ ಹೋಗದಂತೆ ತಡೆಗಟ್ಟಲು ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಇಂದಿಲ್ಲಿ ಮನವಿ ಮಾಡಿದ್ದಾರೆ.

ರವಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರು ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ ಎಂದು ದೂರಿದರು.

23 ಸಾವಿರ ಮಂದಿ ಪೈಕಿ 4500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರಕಾರ ಹೇಳಿದ್ದು, ಅವರೆಲ್ಲರನ್ನೂ ಸರಕಾರ ಕೂಡಲೇ ಪತ್ತೆ ಮಾಡಬೇಕು. ಮೂರನೇ ಹಂತಕ್ಕೆ ಸೋಂಕು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ಆದರೆ, ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದ್ದು, ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೆ, ಆತನಿಗೆ ಸೋಂಕು ಹರಡಿದ್ದು ಹೇಗೆ ಎಂದು ಪತ್ತೆ ಮಾಡಬೇಕು. ಶಿರಾದಲ್ಲಿಯೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂದು ಸ್ಪಷ್ಟಣೆ ನೀಡಬೇಕು. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದರು.

ಮಾಸ್ಕ್, ಸ್ಯಾನಿಟೈಸರ್, ಪಿಪಿಇ, ಟೆಸ್ಟಿಂಗ್ ಕಿಟ್ ಸಾಕಷ್ಟು ಪ್ರಮಾಣದಲ್ಲಿ ಇಲ್ಲ. ಬಂದಿರುವುದು ಗುಣಮಟ್ಟದಲ್ಲ ಎಂಬ ಆರೋಪಗಳಿವೆ. ಈಗ ದಾಸ್ತಾನು ಮಾಡಿರುವುದು ಯಾವುದಕ್ಕೂ ಸಾಲುವುದಿಲ್ಲ. ಸೋಂಕು ಅತ್ಯಂತ ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕಿದೆ. ಸಿದ್ಧ ಉಡುಪು ಕಾರ್ಖಾನೆಗಳಿಗೆ ಕೂಡಲೇ ಮಾಸ್ಕ್ ತಯಾರಿಸುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ರಾಜ್ಯದ 6,020 ಪಂಚಾಯಿತಿಗಳಲ್ಲಿ ಪ್ರತಿ ಪಂಚಾಯಿತಿಗೆ ಒಬ್ಬ ವೈದ್ಯಕೀಯ ಅಧಿಕಾರಿ ನೇಮಕ ಮಾಡಬೇಕು. ಆಹಾರ ಮತ್ತು ಕೃಷಿ, ಮಾರುಕಟ್ಟೆ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ಸಾಮಾಜಿಕ ಅಂತರ ಕಾಪಾಡುವುದು ಮುಖ್ಯ. ಅದೇ ರೀತಿ ರೈತರ ಹಿತವನ್ನು ಕಾಯಬೇಕು. ಎಪ್ರಿಲ್, ಮೇನಲ್ಲಿ ಮುಂಗಾರು ಪೂರ್ವ ಬಿತ್ತನೆ ಆರಂಭವಾಗುತ್ತದೆ. ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಸಮರ್ಪಕವಾಗಿ ಆಗಬೇಕು ಎಂದು ಸೂಚಿಸಿದರು.

ಬೆಂಗಳೂರು ನಗರದಲ್ಲಿ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಹೊರ ರಾಜ್ಯಗಳಲ್ಲಿ ಇದ್ದ ನಮ್ಮವರು ಮತ್ತು ರಾಜ್ಯದ  ಜನರು ಹೊರ ರಾಜ್ಯಗಳಲ್ಲಿದ್ದು ಅವರನ್ನು ಸುರಕ್ಷಿತವಾಗಿ ರಾಜ್ಯಗಳಿಗೆ ಕರೆತರಬೇಕು ಮತ್ತು ಇಲ್ಲಿರುವವರನ್ನು ಆಯಾಯ ರಾಜ್ಯಗಳಿಗೆ ಕಳುಹಿಸಬೇಕು ಎಂದು ಅವರು ತಿಳಿಸಿದರು.

ಮನೆ ಮನೆಗೆ ಅಗತ್ಯ ವಸ್ತುಗಳನ್ನು ತಲುಪಿಸುವುದು ಒಳ್ಳೆಯದು. ಪೊಲೀಸರಿಗೆ ಪ್ರಾಣ ಸಂಕಟ. ಲಾಠಿ ಪ್ರಹಾರ ಸಲ್ಲ. ಅಮಾಯಕರ ಮೇಲೆ ಬಲ ಪ್ರಯೋಗ ಸಲ್ಲ. ಪೌರ ಕಾರ್ಮಿಕರು ಸೇರಿ ಪೊಲೀಸರಿಗೂ ವಿಮೆ ನೀಡುವ ಸಂಬಂಧ ಪ್ರಧಾನಿ ಜತೆ ಸಿಎಂ ಸಮಾಲೋಚನೆ ನಡೆಸಬೇಕು ಎಂದು ಸಿದ್ದರಾಮಯ್ಯ ಸಭೆಯಲ್ಲಿ ಮುಖ್ಯಮಂತ್ರಿಗೆ ಸಲಹೆ ನೀಡಿದರು.

ಮುಂದಿನ ಎರಡು ವಾರ ಪರಿಸ್ಥಿತಿ ಅತ್ಯಂತ ಕಠಿಣವಾಗಿದೆ. ಹೀಗಾಗಿ ಕೊರೋನ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶ್ಯಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಸರಕಾರ ಜಾರಿಗೆ ತರಬೇಕು.

-ಸಿದ್ದರಾಮಯ್ಯ ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X