ವಾಟ್ಸಪ್ನಲ್ಲಿ ಅವಹೇಳನಕಾರಿ ಸಂದೇಶ: ಮೆಲ್ವಿಲ್ ಪಿಂಟೋ ವಿರುದ್ಧ ಪ್ರಕರಣ ದಾಖಲು
ಮಂಗಳೂರು, ಮಾ.29: ದ.ಕ. ಜಿಲ್ಲಾಡಳಿತದ ವಿರುದ್ಧ ವಾಟ್ಸಪ್ನಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಮೆಲ್ವಿನ್ ಪಿಂಟೋ ಎಂಬಾತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಆರೋಪಿಯು ಜಿಲ್ಲಾಡಳಿತ ವಿರುದ್ಧ ಸುಳ್ಳು ವರದಿ, ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತದ ವಿರುದ್ಧ ಸುಳ್ಳು ವರದಿಯನ್ನು ಹರಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾ ಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.
Next Story