Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ವಿರುದ್ಧದ ಯುದ್ಧದಲ್ಲಿ ರೈತರ...

ಕೊರೋನ ವಿರುದ್ಧದ ಯುದ್ಧದಲ್ಲಿ ರೈತರ ಕೈಹಿಡಿಯೋಣ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 March 2020 5:28 PM IST
share
ಕೊರೋನ ವಿರುದ್ಧದ ಯುದ್ಧದಲ್ಲಿ ರೈತರ ಕೈಹಿಡಿಯೋಣ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮಾ. 30: ಕೊರೋನ ವೈರಸ್ ನಮ್ಮ ಮುಂದಿರುವ ಅಗೋಚರ ಯುದ್ಧ. ಇದರ ವಿರುದ್ಧ ಹೋರಾಡುವುದು ಇಂದಿನ ತುರ್ತು. ಆದರೆ, ಯುದ್ಧ ನಡೆಯುವಾಗ ನಮ್ಮವರನ್ನ ರಕ್ಷಣೆ ಮಾಡಿಕೊಳ್ಳಬೇಕಿರುವುದು ನಮ್ಮ ಕರ್ತವ್ಯ. ಈ ಯುದ್ಧದ ನಡುವೆಯೂ ರೈತರನ್ನು ರಕ್ಷಿಸೋಣ. ಸಾರ್ವಜನಿಕರ ಅಗತ್ಯಗಳನ್ನು ಪೂರೈಸೋಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಮಂಡ್ಯದಲ್ಲಿ ಸಪೋಟವನ್ನು ರಸ್ತೆಗೆ ಸುರಿದು, ಚಿಕ್ಕಬಳ್ಳಾಪುರದಲ್ಲಿ ದ್ರಾಕ್ಷಿ ಹಣ್ಣು ತಿಪ್ಪೆಗೆ ಹಾಕಿದ, ಶಿವಮೊಗ್ಗದಲ್ಲಿ ಹೈನುಗಾರಿಕೆಯಿಂದ ಹಾಲು ನಿಲ್ಲಿಸಿದ, ಕೋಲಾರದಲ್ಲಿ ಟೋಮ್ಯಾಟೋ ನಾಶ ಮಾಡಿದ ಘಟನೆಗಳು ರೈತರು ಎದುರಿಸುತ್ತಿರುವ ದುಸ್ಥಿತಿಯನ್ನು ವಿವರಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಇದು ವಿಕೋಪಗೊಳ್ಳುವ ಆತಂಕ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರಕಾರ ರೈತರ ಕೃಷಿ ಉತ್ಪನ್ನಗಳ ಖರೀದಿಗೆ ಶೀಘ್ರವೇ ವ್ಯವಸ್ಥೆ ಮಾಡುವ ಅನಿವಾರ್ಯತೆ ಎದುರಾಗಿದೆ. ಇಲ್ಲದೆ ಹೋದರೆ ಕೃಷಿ ವಲಯ ತೊಂದರೆಗೆ ಈಡಾಗುತ್ತದೆ. ಅದರ ಪರಿಣಾಮಗಳು ಭೀಕರ. ಇದು ಕುಟುಂಬಗಳನ್ನು ಅಪೋಷನ ತೆಗೆದುಕೊಳ್ಳುವ ಜತೆಗೆ ಆರ್ಥಿಕತೆಗೆ ತೀವ್ರ ಪೆಟ್ಟು ನೀಡುತ್ತದೆ. ಇದನ್ನು ನೆನೆದು ನನಗಂತೂ ಆತಂಕವಾಗಿದೆ ಎಂದು ಕುಮಾರಸ್ವಾಮಿ ಖೇಧ ವ್ಯಕ್ತಪಡಿಸಿದ್ದಾರೆ.

ಕೊರೋನ ವೈರಸ್ ರೋಗ ತಡೆಗೆ ಗ್ರಾಮ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಸ್ವಯಂ ಸೇವಕರು, ಸಂಘ-ಸಂಸ್ಥೆಗಳು, ಅಧಿಕಾರಿಗಳ ಸಮಿತಿ ರಚನೆ ಆಗಬೇಕೆಂಬುದು ನನ್ನ ಸಲಹೆ. ಇದೇ ರೀತಿ ಹಾಪ್ ಕಾಮ್ಸ್, ಕೆಎಂಎಫ್ ಸೇರಿದಂತೆ ಸ್ವಯಂ ಸೇವಕ ಗುಂಪುಗಳನ್ನು ಬಳಸಿಕೊಂಡು ರೈತರಿಂದ ಉತ್ಪನ್ನಗಳನ್ನು ಸರಕಾರಗಳ ಮುಂದೆ ನಿಂತು ಖರೀದಿಸಲಿ. ನಂತರ ಮಾರಾಟ ಮಾಡಲಿ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ರೈತರಿಂದ ನೇರವಾಗಿ ಖರೀದಿಸಿದ ಉತ್ಪನ್ನಗಳು ನಗರ, ವಾರ್ಡ್ ಮಟ್ಟದಲ್ಲಿ ವಿತರಣೆ ಮಾಡಲು ವ್ಯವಸ್ಥೆ ಮಾಡಬೇಕು. ಮಾಲ್‍ಗಳನ್ನು ಮೀರಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿರುವುದು ಸಣ್ಣ-ಪುಟ್ಟ ಅಂಗಡಿಗಳು. ರೈತರ ಕೃಷಿ ಉತ್ಪನ್ನಗಳನ್ನು ನೇರವಾಗಿ ಇಂತಹ ಅಂಗಡಿಗಳಿಗೆ ತಲುಪಿಸುವ ವ್ಯವಸ್ಥೆಯೊಂದನ್ನು ಸರಕಾರ ಕೂಡಲೇ ಸೃಷ್ಟಿಮಾಡಬೇಕು ಎಂದು ಕುಮಾರಸ್ವಾಮಿ ಸೂಚಿಸಿದ್ದಾರೆ.

ಹಲವು ರೈತರು ಕೃಷಿ ಉತ್ಪನ್ನಗಳ ಮಾರಾಟಗಾರರು ಈಗಾಗಲೇ ತಮ್ಮ ಪರದಿಯಲ್ಲೆ ಸಾಗಾಟ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ, ಉತ್ಪನ್ನಗಳ ಸಾಗಾಣಿಕೆ ವೇಳೆ ಪೋಲಿಸರು ತಡೆಯುವ ಮತ್ತು ಅವರಿಂದ ದುಡ್ಡು ಕೀಳುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಸರಕಾರ ನಿರ್ಬಂಧ ಹೇರಬಾರದು. ಇದು ರೈತರ ಬದುಕಿನ ಮತ್ತು ಜನರ ಆಹಾರದ ಪ್ರಶ್ನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X