ರೈಸ್, ಎಣ್ಣೆ ಮಿಲ್‌ಗಳು ತ್ಷಣದಿಂದ ಕಾರ್ಯಾಚರಿಸಲು ಉಡುಪಿ ಡಿಸಿ ಸೂಚನೆ
ಉಡುಪಿ, ಮಾ.30: ಜಿಲ್ಲೆಯಲ್ಲಿ ಅಗತ್ಯ ದಿನಸಿ ವಸ್ತುಗಳಾದ ಅಕ್ಕಿ, ತೆಂಗಿನ ಎಣ್ಣೆ ಪೂರೈಕೆ ಮಾಡುವ ರೈಸ್ ಮಿಲ್ ಮತ್ತು ಎಣ್ಣೆ ಮಿಲ್‌ಗಳ ಮಾಲಕರು ತಕ್ಷಣದಿಂದಲೇ ತಮ್ಮ ಮಿಲ್‌ಗಳನ್ನು ತೆರೆದು ಎಂದಿನಂತೆ ಕಾರ್ಯಾಚರಿಸ ಬೇಕು. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಜರಗಿಸಲಾ ಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಗೆ ಹೊರ ಜಿಲ್ಲೆಯಿಂದ ಪೂರೈಕೆಯಾಗುವ ಸಾಮಾಗ್ರಿಗಳ ವಾಹನಗಳಿಗೆ ಸಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ. ದಿನಸಿ ವಸ್ತುಗಳ ಕೊರತೆ ಕುರಿತು ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗ್ಯವಿಲ್ಲ. ದಿನಸಿ ವಸ್ತುಗಳ ಕೊರತೆಯಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ದಿನಸಿ ಸಾಗಾಟ ವಾಹನಗಳ ಸಂಚಾರವನ್ನು ರಾಜ್ಯದ ಯಾವುದೇ ಜಿಲ್ಲೆಯಲ್ಲಿ ತಡೆಯದಂತೆ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿ ದ್ದಾರೆ. ರಖಂ ಮಾರಾಟಗಾರರು ತಮ್ಮ ಅಂಗಡಿಗಳನ್ನು ತೆರೆದು ಚಿಲ್ಲರೆ ಮಾರಾಟಗಾರರಿಗೆ ವಿತರಿಸಬೇಕು. ದಿನಸಿ ವಸ್ತುಗಳ ಕೃತಕ ಅಭಾವ ಸೃಷ್ಠಿಸುವ ಮತ್ತು ಅನಗತ್ಯವಾಗಿ ದಾಸ್ತಾನು ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ರೈತರು ಬೆಳೆದಿರುವ ಕಲ್ಲಂಗಡಿ ಹಣ್ಣು ಹಾಳಾಗದಂತೆ ಅದನ್ನು ಸೂಕ್ತ ರೀತಿಯಲ್ಲಿ ವಿಲೇವಾರಿಗೆ ವ್ಯವಸ್ಥೆ ಮಾಡುವಂತೆ ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದಿನಸಿ ವಸ್ತುಗಳ ಖರೀದಿಗಾಗಿ ಬೆಳಗ್ಗೆ 7 ರಿಂದ 11ರವರೆಗೆ ಸಮಯ ನಿಗದಿಪಡಿ ಸಿದ್ದು, ಸಾರ್ವಜನಿಕರು ಪ್ರತೀ ದಿನ ಮನೆಯಿಂದ ಅನಗತ್ಯ ಹೊರಬಂದು ವಸ್ತುಗಳನ್ನು ಖರೀದಿಸದೇ ಅಗತ್ಯವಿದ್ದಾಗ ಮಾತ್ರ, ಸಾಧ್ಯವಾದಲ್ಲಿ ವಾರದಲ್ಲಿ ಒಮ್ಮೆ ವಸ್ತುಗಳನ್ನು ಖರೀದಿಸ ಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.







