Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದಿನಿಂದ ವಲಸೆ ಕಾರ್ಮಿಕರು ರಸ್ತೆಯಲ್ಲಿ...

ಇಂದಿನಿಂದ ವಲಸೆ ಕಾರ್ಮಿಕರು ರಸ್ತೆಯಲ್ಲಿ ಕಾಣಿಸಿಕೊಳ್ಳುವುದಿಲ್ಲ: ಸುಪ್ರೀಂಗೆ ಕೇಂದ್ರ ಭರವಸೆ

ವಾರ್ತಾಭಾರತಿವಾರ್ತಾಭಾರತಿ31 March 2020 1:34 PM IST
share
ಇಂದಿನಿಂದ ವಲಸೆ ಕಾರ್ಮಿಕರು ರಸ್ತೆಯಲ್ಲಿ ಕಾಣಿಸಿಕೊಳ್ಳುವುದಿಲ್ಲ: ಸುಪ್ರೀಂಗೆ ಕೇಂದ್ರ ಭರವಸೆ

ಹೊಸದಿಲ್ಲಿ, ಮಾ.31:ತಮ್ಮ ಗ್ರಾಮಗಳಿಗೆ ನಗರಗಳಿಗೆ ಪಲಾಯನ ಮಾಡುತ್ತಿದ್ದ ವಲಸೆ ಕಾರ್ಮಿಕರು ಸೇರಿದಂತೆ ಸಾವಿರಾರು ಜನರಿಗೆ ತಾತ್ಕಾಲಿಕವಾಗಿ ಕಲ್ಪಿಸಲಾಗಿರುವ ಮನೆಗಳಲ್ಲಿ ಆಹಾರ, ನೀರು ಮತ್ತು ಔಷಧಿಗಳಂತಹ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ.

 ವಲಸೆ ಕಾರ್ಮಿಕರ ದೊಡ್ಡ ಪ್ರಮಾಣದ ವಲಸೆ ನಿಯಂತ್ರಣಕ್ಕೆ ತರಲಾಗಿದೆ ಮತ್ತು ಅವರೆಲ್ಲರನ್ನೂ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದೆ.

 “ಈಗ ಯಾರೂ ರಸ್ತೆಯಲ್ಲಿಲ್ಲ ಎಂದು ಹೇಳಲು ನನಗೆ ಸೂಚನೆಗಳಿವೆ. ಅಂತವರು ಯಾರಾದರೂ ಕಂಡು ಬಂದರೆ ಅವರನ್ನು ಲಭ್ಯವಿರುವ ಆಶ್ರಯ ತಾಣಗಳಿಗೆ ಕರೆದೊಯ್ಯಲಾಗಿದೆ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಸುಪ್ರೀಂ ಕೋರ್ಟ್ ಎರಡು ಅರ್ಜಿಗಳನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಒಂದು ಅರ್ಜಿದಾರರ ಪರ ವಕೀಲರಾದ ರಶ್ಮಿ ಬನ್ಸಾಲ್ ಮತ್ತು ಅನುಜ್ ಗುಪ್ತಾ ಹಾಗೂ ಇನ್ನೊಂದು ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ವಲಸೆ ಕಾರ್ಮಿಕರ ದುಃಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಮಾರ್ಚ್ 25 ರಂದು ಪ್ರಾರಂಭವಾದ ಲಾಕ್‌ಡೌನ್ ದೇಶದ ದೊಡ್ಡ ನಗರಗಳಿಂದ ಕಾರ್ಮಿಕರನ್ನು ತಮ್ಮ ದೂರದ ಸ್ಥಳೀಯ ಪಟ್ಟಣಗಳು ಮತ್ತು ಗ್ರಾಮಗಳಿಗೆ ಸ್ಥಳಾಂತರಿಸಲು ಕಾರಣವಾಯಿತು. ಪೂರ್ವ ದಿಲ್ಲಿಯ ಆನಂದ್ ವಿಹಾರ್ ಬಸ್ ನಿಲ್ದಾಣದಲ್ಲಿ ಸಾವಿರಾರು ಜನರು ಉತ್ತರ ಪ್ರದೇಶಕ್ಕೆ ಪ್ರಯಾಣಿಸಲು ದಿಲ್ಲಿಗೆ ಬಂದಾಗ ಪರಿಸ್ಥಿತಿ ಹದಗೆಟ್ಟಿತು. ಇದಲ್ಲದೆ, ಸಾರ್ವಜನಿಕ ಸಾರಿಗೆ ಲಭ್ಯವಿಲ್ಲದ ಕಾರಣ ಅವರಲ್ಲಿ ಅನೇಕರು ತಮ್ಮ ಕುಟುಂಬಗಳೊಂದಿಗೆ ಕಾಲ್ನಡಿಗೆಯಲ್ಲಿ ಹೊರಟರು.

ಈ ಸಂಬಂಧ ಉನ್ನತ ನ್ಯಾಯಾಲಯ ಸೋಮವಾರ ಕೇಂದ್ರ ಸರಕಾರದಿಂದ ವಸ್ತುಸ್ಥಿತಿ ಬಗ್ಗೆ ವರದಿ ಕೇಳಿತ್ತು.

ಮಂಗಳವಾರ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೊರೋನ ವೈರಸ್ ಹರಡುವುದನ್ನು ತಪ್ಪಿಸಲು ಕೇಂದ್ರವು ಕೈಗೊಂಡ ವಿವಿಧ ಕ್ರಮಗಳನ್ನು ವಿವರಿಸಿದೆ.

ಕೇಂದ್ರದಿಂದ ಸಾಂಸ್ಥಿಕ ಪ್ರತಿಕ್ರಿಯೆ ಇದೆ ಮತ್ತು ಪರಿಸ್ಥಿತಿಯನ್ನು ಪ್ರಧಾನಮಂತ್ರಿಗಳು ನಿಭಾಯಿಸುತ್ತಿದ್ದಾರೆ. ಚೀನಾ, ಹಾಂಗ್‌ಕಾಂಗ್‌ನಿಂದ ಆಗಮಿಸಿ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ಜನವರಿ 18ರಂದು ಮೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪ್ರಾರಂಭವಾಯಿತು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಜನವರಿ 30ರ ಮೊದಲು ಮತ್ತು ಮಾರ್ಚ್ 4ರ ಹೊತ್ತಿಗೆ ಎಲ್ಲಾ ಅಂತರ್‌ರಾಷ್ಟ್ರೀಯ ವಿಮಾನಗಳಿಗೆ ಥರ್ಮಲ್ ಸ್ಕ್ರೀನಿಂಗ್‌ನ್ನು ಪ್ರಾರಂಭಿಸಲಾಯಿತು . ರೋಗ ಲಕ್ಷಣ ಹೊಂದಿರುವ ಎಲ್ಲ ರೋಗಿಗಳನ್ನು ನೇರವಾಗಿ ವಿಮಾನ ನಿಲ್ದಾಣ ಪಕ್ಕದ ಐಸೋಲೇಶನ್ ಕೇಂದ್ರಗಳಿಗೆ ಕರೆದೊಯ್ಯಲಾಯಿತು.

ಕೊರೋನ ವೈರಸ್ ಹರಡುವಿಕೆ ಸಂಬಂಧಿಸಿ ಸುಳ್ಳು ಸುದ್ದಿ ಹರಡಿರುವ ಬಗ್ಗೆ ಕೇಂದ್ರವು ನ್ಯಾಯಾಲಯದ ಗಮನವನ್ನು ಸೆಳೆಯಿತು. ಅಂತಹ ಸುದ್ದಿಗಳು ಇಡೀ ದೇಶಕ್ಕೆ ಭೀತಿ ಮತ್ತು ಗಂಭೀರ ಹಾನಿಯನ್ನುಂಟುಮಾಡುತ್ತವೆ ಎಂದು ಕೇಂದ್ರ ಸರಾಕರ ಮಾಹಿತಿ ನೀಡಿದೆ.

ಆದ್ದರಿಂದ ವಸ್ತುಸ್ಥಿತಿಯನ್ನು ಅರಿಯದೆ ಯಾವುದನ್ನೂ ಪ್ರಕಟಿಸದಂತೆ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸರಕಾರ ಸುಪ್ರೀಂಗೆ ಮನವಿ ಮಾಡಿತು.

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರನ್ನೊಳಗೊಂಡ ನ್ಯಾಯಪೀಠವು ಕೊರೋನ ವೈರಸ್ ಬೆದರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಕೇಂದ್ರವನ್ನು ಕೇಳಿದೆ.

ಸೋಶಿಯಲ್ ಮೀಡಿಯಾ ಮೂಲಕ ಸುಳ್ಳು ಮತ್ತು ತಪ್ಪಾದ ಮಾಹಿತಿಯನ್ನು ಹರಡುವುದನ್ನು ತಡೆಯುವ ಅಗತ್ಯವನ್ನು ಇದು ಒತ್ತಿಹೇಳುತ್ತದೆ ಮತ್ತು ನಕಲಿ ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಹಸಿರು ನಿಶಾನೆ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X