Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿ ಚಟುವಟಿಕೆಗೆ ಅಗ್ಯ ವಸ್ತುಗಳ...

ಕೃಷಿ ಚಟುವಟಿಕೆಗೆ ಅಗ್ಯ ವಸ್ತುಗಳ ವಿತರಣೆ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ31 March 2020 11:15 PM IST
share

ಉಡುಪಿ, ಮಾ.31:ದೇಶದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ವೈರಸ್‌ನ ಕಾರಣಕ್ಕಾಗಿ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಯಾಗಿದ್ದು, ಇದರಿಂದ ರೈತರಿಗೆ ಕೃಷಿ ಪರಿಕರಗಳ ಲಭ್ಯತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗುತ್ತಿದೆ. ಕೃಷಿ ಚಟುವಟಿಕೆಗಳಿಗೆ ಸಹಾಯಕವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಕೀಟನಾಶಕಗಳು, ಕೃಷಿ ಕೊಯ್ಲು ಯಂತ್ರೋಪಕರಣಗಳ ಸಾಗಣೆಗೆ ಜಿಲ್ಲೆಯಲ್ಲಿ ಅಗತ್ಯಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರಗಳಾದ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ ಹಾಗೂ ಕೃಷಿ ಯಂತ್ರೋಪಕರಣಗಳು ಸೇರುವುದರಿಂದ ಇವುಗಳ ವಿತರಣೆ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-19 ಸೋಂಕು ಹರಡುಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳನ್ನು ತಪ್ಪದೆ ಪಾಲಿಸುವಂತೆ ವಿತರಕರಿಗೆ ಕಡ್ಡಾಯಗೊಳಿಸಲಾಗಿದೆ.

ವಿತರಣಾ ಸಮಯದಲ್ಲಿ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಪರಿಕರಗಳನ್ನು ಖರೀದಿಸುವ ವೇಳೆ ರೈತರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರಾಟ ಮಳಿಗೆಯ ಮುಂಭಾಗದಲ್ಲಿ ಗುರುತುಗಳನ್ನು ಮಾಡಬೇಕು. ರೈತರಿಗೆ ಸ್ಯಾನಿಟೈಜರ್ಸ್/ಸಾಬೂನು ಮತ್ತು ನೀರಿನ ವ್ಯವಸ್ಥೆ ಯನ್ನು ಮಾರಾಟ/ವಿತರಕರು ಮಾಡಬೇಕು. ಆದಷ್ಟು ಮಂದಿ ಮಾಸ್ಕ್‌ಗಳನ್ನು ಹಾಕಿಕೊಳ್ಳಲು ಸೂಚನೆಗಳನ್ನು ನೀಡಬೇಕು.

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳನ್ನು ಉಲ್ಲಂಸುವ ಮಾರಾಟ ಹಾಗೂ ವಿತರಕರ ಪರವಾನಗಿಯನ್ನು ಅಮಾನತು/ರದ್ದುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ರೈತರಿಗೆ ಕೃಷಿಗೆ ಬೇಕಾದ ಅಗತ್ಯ ವಸ್ತುಗಳನ್ನು ಸಾಗಿಸಲು ವಾಹನ ವ್ಯವಸ್ಥೆ ಮಾಡುವಲ್ಲೂ ಕ್ರಮ ವಹಿಸಬೇಕು. ಇವುಗಳನ್ನು ಮಾರಾಟ ಮಾಡಲು ಹಾಗೂ ಖರೀದಿಸಲು ಬೆಳಗ್ಗೆ 7:00ರಿಂದ 11:00ರವರೆಗೆ ಸಮಯ ನಿಗದಿ ಪಡಿಸ ಲಾಗಿದೆ.ಕೃಷಿ ಚಟುವಟಿಕೆಗಳಿಗೆ ಅನುಕೂಲ ವಾಗುವಂತೆ ಅಗತ್ಯ ವಸ್ತುಗಳ ವಿತರಣೆಯ ವೇಳೆ ಮೇಲಿನ ಎಲ್ಲಾ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X