Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಸುವ್ಯವಸ್ಥಿತ ಪಡಿತರ...

ಉಡುಪಿ ಜಿಲ್ಲೆಯಲ್ಲಿ ಸುವ್ಯವಸ್ಥಿತ ಪಡಿತರ ವಿತರಣೆಗೆ ಕ್ರಮ: ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ31 March 2020 11:16 PM IST
share

ಉಡುಪಿ, ಮಾ.31: ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾದ್ಯಂತ ನಿಬರ್ಂಧಕಾಜ್ಞೆ ಜಾರಿಯಲ್ಲಿರುವುದರಿಂದ ರಾಜ್ಯ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೋವಿಡ್-19 ಸಭೆಯಲ್ಲಿ ನೀಡಿರುವ ನಿರ್ದೇಶನದಂತೆ ಎಪ್ರಿಲ್ ಹಾಗೂ ಮೇ ತಿಂಗಳ ಪಡಿತರವನ್ನು ನಾಳೆಯಿಂದ ವಿತರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಜಿಲ್ಲೆಯ ಅಂತ್ಯೋದಯ/ಬಿಪಿಎಲ್ ಪಡಿತರ ಚೀಟಿದಾರರಿಗೆ ಎ.1ರಿಂದ ಜಿಲ್ಲೆಯಲ್ಲಿರುವ ಎಲ್ಲಾ ಒಟ್ಟು 292 ಸೊಸೈಟಿ /ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಮಾಡಲಾಗುವುದು. ಈ ವೇಳೆ ಕೆಳಗಿನ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ವಿತರಕರಿಗೆ ತಿಳಿಸಿದ್ದಾರೆ.

ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿಯ ಲೆಕ್ಕದಲ್ಲಿ ಪ್ರತಿ ದಿನ 50ರಿಂದ 100 ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ನೀಡುವ ಬಗ್ಗೆ ಮುಂಚಿತವಾಗಿ ಬೇರೆ ಬೇರೆ ಸಮಯ ನಿಗದಿಪಡಿಸಿ ದೂರವಾಣಿಗಳ ಮೂಲಕ ಸಂದೇಶ ನೀಡಬೇಕು. ಈ ಮೂಲಕ ಪಡಿತರ ವಿತರಣೆ ವೇಳೆ ಜನ ಸಂದಣಿ ಯಾಗದಂತೆ ನೋಡಿಕೊಳ್ಳಬೇಕು.

ಹೊರ ಜಿಲ್ಲೆಯ ಪಡಿತರ ಚೀಟಿದಾರರಿಗೆ- ಪೋರ್ಟೇಬಿಲಿಟಿ- ವ್ಯವಸ್ಥೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ವಿತರಿಸಬೇಕು. ಪಡಿತರ ವಿತರಣೆಯ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಲು ನ್ಯಾಯಬೆಲೆ ಅಂಗಡಿ ಮುಂಭಾಗದಲ್ಲಿ ಗುರುತುಗಳನ್ನು ಮಾಡುವುದ ರೊಂದಿಗೆ, ಪಡಿತರವನ್ನು ತೆಗೆದುಕೊಳ್ಳಲು ಬರುವವರಿಗೆ ಸ್ಯಾನಿಟೈಜರ್ಸ್/ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಹೆಚ್ಚಿನ ಗಮನಹರಿಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಸುರಕ್ಷತೆಯ ದೃಷ್ಠಿಯಿಂದ ಇವುಗಳನ್ನು ಪರಿಶೀಲಿಸಲು ಓರ್ವ ಅಧಿಕಾರಿುನ್ನು ನೇಮಿಸುವಂತೆ ತಿಳಿಸಲಾಗಿದೆ.

ಪಡಿತರ ವಿತರಣೆಯ ಸಮಯದಲ್ಲಿ ಓಟಿಪಿ ಬರದೇ ಇದ್ದಲ್ಲಿ ಅದಕ್ಕೆ ಕಾಯದೆ ರಿಜಿಸ್ಟರ್‌ನಲ್ಲಿ ಹೆಸರು ನೊಂದಾಯಿಸಿ ಪಡಿತರ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಪಡಿತರ ನೀಡುವಾಗ ವಿಳಂಬವಾಗದಂತೆ ನೋಡಿ ಕೊಳ್ಳಬೇಕು. ಈ ವೇಳೆ ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೀಡಿರುವ ಎಲ್ಲಾ ಸೂಚನೆಗಳು ಹಾಗೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳಲಾಗುವುದು.

ಯಾವುದೇ ಕಾರಣಕ್ಕೂ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆ ಯಾಗದಂತೆ ಕ್ರಮವಹಿಸಿ ಸಮನ್ವಯ ಸಾಧಿಸಲು ಆಯಾ ತಾಲೂಕು ಗಳಿಗೆ ಸಂಬಂಧಪಟ್ಟ ತಹಶೀಲ್ದಾರ್‌ಗಳಿಗೆ ಸೂಚಿಸಲಾಗಿದೆ. ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲೂ ಪಡಿತರ ವಿತರಣೆಯ ವೇಳೆ ಮೇಲಿನ ಎಲ್ಲಾ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X