Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೋನ...

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೋನ ಸೋಂಕು ಪ್ರಕರಣ ಇಲ್ಲ

ಸೋಂಕು ಲಕ್ಷಣವಿದ್ದ 9 ಮಂದಿಯ ವೈದ್ಯಕೀಯ ಪರೀಕ್ಷೆ ನೆಗೆಟಿವ್

ವಾರ್ತಾಭಾರತಿವಾರ್ತಾಭಾರತಿ31 March 2020 11:17 PM IST
share
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೋನ ಸೋಂಕು ಪ್ರಕರಣ ಇಲ್ಲ

ಚಿಕ್ಕಮಗಳೂರು, ಮಾ.31: ಜಿಲ್ಲೆಯಲ್ಲಿ ಕಳೆದ ಫೆ.15ರಿಂದ ಮಾ.31ರವರೆಗೆ ಕೊರೋನ ಸೋಂಕಿತರ ಒಂದೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ವಿದೇಶಕ್ಕೆ ಹೋಗಿ ಬಂದಿರುವ 273 ಮಂದಿಯನ್ನು ಜಿಲ್ಲಾದ್ಯಂತ ಗುರುತಿಸಲಾಗಿದ್ದು, ಎಲ್ಲರನ್ನೂ ಹೋಂ ಕ್ವಾರಂಟೈನ್ ನಿಗಾದಲ್ಲಿಡಲಾಗಿದೆ. ಇಂತವರ ಮನೆಗಳಿಗೆ ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸರು ಪ್ರತಿದಿನ ಎರಡು ಬಾರಿ ಭೇಟಿ ನೀಡಿ ಪರಿಶೀಲಿಸುವ ಮೂಲಕ ನಿಗಾವಹಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 273 ಮಂದಿ ಹೋಂ ಕ್ವಾರಂಟೈನ್‍ನಲ್ಲಿದ್ದು, ಎಲ್ಲರೂ ವಿದೇಶಕ್ಕೆ ಹೋಗಿ ಬಂದವರಾಗಿದ್ದಾರೆ. ಎಲ್ಲರಿಗೂ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಪಾಲಿಸಬೇಕಾದ ನಿಯಮಗಳನ್ನು ಮನವರಿಕೆ ಮಾಡಲಾಗಿದ್ದು, ಎಲ್ಲರೂ ನಿಯಮಗಳನ್ನು ಪಾಲಿಸುತ್ತಿದ್ದಾರೆ. 273 ಮಂದಿ ಪೈಕಿ ಫೆ.15ರಿಂದ ಮಾ.31ರವರೆಗೆ 9 ಮಂದಿಯಲ್ಲಿ ಕೊರೋನ ವೈರಸ್ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ಈ 9 ಮಂದಿಯನ್ನು ಜಿಲ್ಲಾಸ್ಪತ್ರೆಯ ಐಸೋಲೇಶನ್ ವಾರ್ಡ್‍ನಲ್ಲಿ ಚಿಕಿತ್ಸೆಗೆ ದಾಖಲಿಸಿ ಗಂಟಲ ದ್ರವ ಹಾಗೂ ರಕ್ತದ ಮಾದರಿಗಳನ್ನು ಹಾಸನ ಹಾಗೂ ಶಿವಮೊಗ್ಗ ನಗರಗಳಲಿರುವ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲರ ವರದಿಗಳೂ ಬಂದಿದ್ದು, ಎಲ್ಲರ ವರದಿಗಳೂ ನೆಗೆಟಿವ್ ಆಗಿವೆ ಎಂದು ಅವರು ತಿಳಿಸಿದರು.

ವಿದೇಶಗಳಿಗೆ ಭೇಟಿ ನೀಡಿ ಹಿಂದಿರುಗಿರುವ 273 ಮಂದಿ ಲೈಕಿ 24 ಮಂದಿ 28 ದಿನಗಳ ಹೋಂ ಕ್ವಾರೈಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 14 ದಿನಗಳ ಹೋಂ ಕ್ವಾರೈಂಟೈನ್ ಅವಧಿಯನ್ನು 193ಮಂದಿ ಪೂರೈಸಿದ್ದು, ಈ ಪೈಕಿ ಯಾರಲ್ಲೂ ಸೋಂಕಿನ  ಲಕ್ಷಣವೂ ಕಂಡುಬಂದಿಲ್ಲ. 14 ದಿನಗಳ ನಿಗಾ ಅವಧಿಯನ್ನು ಪೂರೈಸಿದವರನ್ನು ಇನ್ನೂ 14 ದಿನಗಳ ಕಾಲ ಹೋಂ ಕ್ವಾರೈಂಟೈನ್ ನಿಗಾದಲ್ಲಿಡಲಾಗುವುದು. ಎಪ್ರಿಲ್ 14ರ ನಂತರ 14 ದಿನಗಳ ಕ್ವಾರಂಟೈನ್ ಅವಧಿ ಪೂರೈಸಿದವರನ್ನು ಮತ್ತೆ 14 ದಿನಗಳ ಕಾಲ ಕ್ವಾರಂಟೈನ್‍ನಲ್ಲಿಡಬೇಕೋ ಬೇಡವೇ ಎಂಬುದನ್ನು ಜಿಲ್ಲಾಡಳಿತ ತೀರ್ಮಾನಿಸಲಿದೆ ಎಂದು ಡಾ.ಮಂಜುನಾಥ್ ಸ್ಪಷ್ಟ ಪಡಿಸಿದರು.

ಸರಕಾರದ ಆದೇಶದಂತೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ಅವರವರ ಮನೆಗಳಲ್ಲಿ ಹೋಂ ಕ್ವಾರಂಟೈನ್ ನಿಗಾದಲ್ಲಿರುವವರ ಕೈಗಳಿಗೆ ಮುದ್ರೆಗಳನ್ನು ಹಾಕಲಾಗುತ್ತಿದೆ. ಅಲ್ಲದೇ ಕ್ವಾರಂಟೈನ್‍ನಲ್ಲಿರುವವರ ಕುಟುಂಬಸ್ಥರನ್ನೂ ಕ್ವಾರಂಟೈನಲ್ಲಿರುವಂತೆ ಸೂಚನೆ ನೀಡಲಾಗಿದೆ ಎಂದ ಅವರು, ಕ್ವಾರಂಟೈನ್‍ನಲ್ಲಿರುವವರ ಮನೆಗಳ ಮುಂದೆ ಸಾರ್ವಜನಿಕರ ಮಾಹಿತಿ, ಜಾಗೃತಿಗಾಗಿ ಪೋಸ್ಟರ್‍ಗಳನ್ನೂ ಅಂಟಿಸಲಾಗುತ್ತಿದೆ. ಅಲ್ಲದೇ ಆರೋಗ್ಯ ಕಾರ್ಯಕರ್ತರು, ಪೊಲೀಸರ ಮೂಲಕ ಮನೆ ಮಂದಿ ಹೊರ ಬಾರದಂತೆ ನಿಗಾ ವಹಿಸಲಾಗುತ್ತಿದೆ ಎಂದವರು ತಿಳಿಸಿದರು.

ಕೇಂದ್ರ ಸರಕಾರ ಎಲ್ಲ ವಿಮಾನಯಾನ ಸೇವೆಗಳನ್ನು ನಿರ್ದಿಷ್ಟ ಅವಧಿವರೆಗೆ ರದ್ದುಗೊಳಿಸಿದೆ. ಇದರಿಂದಾಗಿ ಮಾ.29ರಂದು ವಿದೇಶದಿಂದ ಬಂದು ಹೋಂ ಕ್ವಾರಂಟೈನ್‍ನಲ್ಲಿದ್ದವರ ಸಂಖ್ಯೆ 271 ಇತ್ತು. ಮಾ.30ರಂದು ಸೋಮವಾರ ಮತ್ತಿಬ್ಬರು ವಿದೇಶದಿಂದ ಬಂದವರು ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಮಾ.31ರಂದು ವಿದೇಶದಿಂದ ಆಗಮಿಸಿದವರು ಪತ್ತೆಯಾಗಿಲ್ಲ ಎಂದು ಇದೇ ವೇಳೆ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ಉಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಕೊರೋನಾ ಸೋಂಕು ಪೀಡಿತರಿಗೆ ಅಗತ್ಯ ಚಿಕಿತ್ಸೆ ನೀಡಲು ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಚಿಕಿತ್ಸೆ ಸಂಬಂಧ ಔಷಧಗಳು, ಜೀವ ರಕ್ಷಕ ಪರಿಕರಗಳ ದಾಸ್ತಾನು ಇದೆ. ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್, ಕೈಗವುಸುಗಳಿಗೂ ಕೊರತೆ ಇಲ್ಲ ಎಂದ ಅವರು, ಆರೋಗ್ಯ ಇಲಾಖೆಯ ಯಾವುದೇ ವೈದ್ಯರು, ಅಧಕಾರಿಗಳು, ಸಿಬ್ಬಂದಿಗೆ ರಜೆ ನೀಡಿಲ್ಲ. ಎಲ್ಲ ಸಿಬ್ಬಂದಿಯೂ ಪ್ರತಿದಿನ ಕರ್ತವ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿ ಕೊರತೆ ಕಂಡುಬಂದಲ್ಲಿ ಬೇರೆ ಇಲಾಖೆಗಳ ಸಿಬ್ಬಂದಿಯನ್ನು ಸೇವೆಗೆ ನಿಯೋಜಿಸಿಕೊಳ್ಳಲು ಸರಕಾರದ ಆದೇಶವಿದೆ ಎಂದರು.

ಲಾಕ್‍ಡೌನ್‍ನಿಂದಾಗಿ ನಗರ, ಪಟ್ಟಣ, ಗ್ರಾಮೀಣ ಭಾಗದಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ತೊಂದರೆ ಆಗಿದ್ದು, ಈ ಸಮಸ್ಯೆಯನ್ನು ಪರಿಹರಿಸಲು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ನಗರಸಭೆ ಸೇರಿದಂತೆ ಸ್ಥಳೀಯ ಆಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಇದೇ ವೇಳೆ ಡಿಎಚ್‍ಒ ಉಮೇಶ್ ತಿಳಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಸದ್ಯ ಮೂರು ವೆಂಟಿಲೇಟರ್ ಗಳು ಸುಸ್ಥಿತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟು 9 ವೆಂಟಿಲೇಟರ್ ಗಳಿವೆ. ಇನ್ನೂ 10 ವೆಂಟಿಲೇಟರ್‍ಗಳಿಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.
- ಡಾ.ಮಂಜುನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ

ಕೊರೋನ ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರಕಾರ ಎ.14ರವರೆಗೆ ಲಾಕ್‍ಡೌನ್ ಆದೇಶ ಹೊರಡಿಸಿದೆ. ಅಲ್ಲಿಯವರೆಗೆ ಜನರು ಅನಗತ್ಯವಾಗಿ ಮನೆಗಳಿಂದ ಹೊರಬರುವುದನ್ನು ನಿಲ್ಲಿಸಲೇಬೇಕು. ಅಗತ್ಯವಸ್ತುಗಳಿಗಾಗಿ ಮನೆಯಿಂದ ಹೊರ ಬಂದಾಗ ಸಾಮಾಜಿಕ ಅಂತರ ಹಾಗೂ ದೈಹಿಕ ಅಂತರವನ್ನೂ ಕಾಯ್ದುಕೊಳ್ಳುವುದು ಅತ್ಯಗತ್ಯ. ಅನಗತ್ಯವಾಗಿ ಮಾಸ್ಕ್ ಧರಿಸಿಕೊಳ್ಳುವ ಆವಶ್ಯಕತೆ ಇಲ್ಲ. ಕೊರೋನ ವೈರಸ್ ಮಾರಕ ರೋಗವಾಗಿದ್ದು, ಅದಕ್ಕೆ ಮನೆಯಲ್ಲಿರುವುದೇ ಮದ್ದಾಗಿದೆ.
- ಡಾ.ಎಸ್.ಎನ್.ಉಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X