Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಲ್ಲದ ಕೊರೋನ ಅಟ್ಟಹಾಸ: ಒಂದೇ ದಿನ 389...

ನಿಲ್ಲದ ಕೊರೋನ ಅಟ್ಟಹಾಸ: ಒಂದೇ ದಿನ 389 ಮಂದಿಗೆ ಸೋಂಕು ದೃಢ; ಸಾವಿನ ಸಂಖ್ಯೆ 52ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ1 April 2020 11:05 PM IST
share
ನಿಲ್ಲದ ಕೊರೋನ ಅಟ್ಟಹಾಸ: ಒಂದೇ ದಿನ 389 ಮಂದಿಗೆ ಸೋಂಕು ದೃಢ; ಸಾವಿನ ಸಂಖ್ಯೆ 52ಕ್ಕೇರಿಕೆ

ಹೊಸದಿಲ್ಲಿ, ಎ.1: ಭಾರತಾದ್ಯಂತ ಕೊರೋನಾ ವೈರಸ್ ಸೋಂಕು ಶರವೇಗದಿಂದ ಹರಡುತ್ತಿದ್ದು, ಕಳೆದ 24 ತಾಸುಗಳಲ್ಲಿ 386 ಮಂದಿಗೆ ಸೋಂಕು ತಗಲಿದೆ. ಇದರೊಂದಿಗೆ ದೇಶಾದ್ಯಂತ ಕೊರೋನಾ ಸೋಂಕಿಗೊಳಗಾದವರ ಸಂಖ್ಯೆ 1751ಕ್ಕೇರಿದೆ. ಮಂಗಳವಾರ ಒಟ್ಟು 5 ಮಂದಿ ಕೊರೋನಾ ಪೀಡಿತರು ಸಾವನ್ನಪ್ಪಿದ್ದು, ದೇಶದಲ್ಲಿ ಈ ಮಾರಕ ರೋಗಕ್ಕೆ ಬಲಿಯಾದವರ ಸಂಖ್ಯೆ 52ಕ್ಕೇರಿದೆ.

ಹೊಸದಿಲ್ಲಿ ಹಾಗೂ ಇತರ ರಾಜ್ಯಗಳಲ್ಲಿ ವರದಿಯಾಗಿರುವ ಅನೇಕ ಕೋವಿಡ್-19 ಪ್ರಕರಣಗಳು ದಿಲ್ಲಿಯ ನಿಝಾಮುದ್ದೀನ್ ಮರ್ಕಝ್‌ನಲ್ಲಿ ನಡೆದ ಧಾರ್ಮಿಕ ಸಮಾವೇಶದ ಜೊತೆ ಸಂಬಂಧ ಹೊಂದಿರುವುದು ಪತ್ತೆಯಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ.

ದೇಶಾದ್ಯಂತ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಪೈಕಿ 132 ಮಂದಿ ಗುಣಮುಖರಾಗಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಾಶ್ಮೀರ ಓರ್ವ ಹಾಗೂ ತೆಲಂಗಾಣದ ಆರು ಮಂದಿ ಸೇರಿದಂತೆ ಒಟ್ಟು ಏಳು ಜನರು, ಈ ಸಮಾವೇಶದಲ್ಲಿ ಪಾಲ್ಗೊಂಡ ಕೆಲವು ದಿನಗಳ ಬಳಿಕ ಕೊರೋನ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಅದು ಹೇಳಿದೆ.

ಇತ್ತ ದಿಲ್ಲಿ ಸರಕಾರವು ನಿಝಾಮುದ್ದೀನ್ ಮರ್ಕಝ್‌ನಲ್ಲಿದ್ದ 2361 ಮಂದಿಯನ್ನು ತೆರವುಗೊಳಿಸಿದೆ. ಈವರೆಗೆ ನಿಝಾಮುದ್ದೀನ್ ಮರ್ಕಝ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ್ದವರ ಪೈಕಿ 91 ಮಂದಿ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ. ಇವರಲ್ಲಿ 50 ಮಂದಿ ತಮಿಳುನಾಡಿನವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾರ್ಚ್ 9 ಹಾಗೂ ಮಾರ್ಚ್ 10ರಂದು ನಿಝಮುದ್ದೀನ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಭಾರತೀಯರು ಹಾಗೂ ನೂರಾರು ವಿದೇಶಿಯರು ಭಾಗವಹಿಸಿದ್ದರು ಎಂದು ಅವು ಹೇಳಿವೆ.

ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪುಣೆಯ ಮಂದಿಯನ್ನು ಮಂಗಳವಾರ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನವಲ್ ಕಿಶೋರ್ ರಾಮ್ ತಿಳಿಸಿ ದ್ದಾರೆ. ಈ ಮಧ್ಯೆ ನಿಝಾಮುದ್ದೀನ್‌ನಲ್ಲಿ ನಡೆದ ಸಮಾವೇಶಕ್ಕೆ ಹಾಜರಾಗಿದ ಉತ್ತರ ಪ್ರದೇಶದ ಜಾನ್‌ಪುರ ಇಲ್ಲೆಯ 60 ಮಂದಿಯನ್ನು ಕೂಡಾ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಗೌತಮ್‌ಬುದ್ಧ ನಗರದ 34 ನಿವಾಸಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರಾದರೂ, ಅವರ್ಯಾರಿಗೂ ರೋಗಲಕ್ಷಣಗಳು ಕಂಡುಬಂದಿಲ್ಲ. ಆದಾಗ್ಯೂ ಮುಂಜಾಗರೂಕತಾ ಕ್ರಮವಾಗಿ ಅವರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆಯೆಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X