Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಇದೆಂತಹ ಗುಲಾಮಗಿರಿ ?': ಪಿಎಂ ಕೇರ್...

'ಇದೆಂತಹ ಗುಲಾಮಗಿರಿ ?': ಪಿಎಂ ಕೇರ್ ಫಂಡ್‍ಗೆ ರಾಜ್ಯದ ಶಾಸಕರ ದೇಣಿಗೆ ಬಗ್ಗೆ ಸಿದ್ದರಾಮಯ್ಯ ಕಿಡಿ

"ದಿಲ್ಲಿ ದೊರೆಗಳ ಎದುರು ಕರ್ನಾಟಕ...."

ವಾರ್ತಾಭಾರತಿವಾರ್ತಾಭಾರತಿ2 April 2020 5:00 PM IST
share
ಇದೆಂತಹ ಗುಲಾಮಗಿರಿ ?: ಪಿಎಂ ಕೇರ್ ಫಂಡ್‍ಗೆ ರಾಜ್ಯದ ಶಾಸಕರ ದೇಣಿಗೆ ಬಗ್ಗೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಎ. 2: ಕ್ಷೇತ್ರದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಸಂಸದರ ನಿಧಿಯ ಹಣವನ್ನು ಬಿಜೆಪಿ ಸಂಸದರು, ‘ಪ್ರಧಾನ ಮಂತ್ರಿ ಪರಿಹಾರ ನಿಧಿ’ಗೆ ನೀಡುವುದು ನಿಯಮಬಾಹಿರ. ಮಾತ್ರವಲ್ಲ, ಸ್ವಕ್ಷೇತ್ರದ ಮತದಾರರಿಗೆ ಮಾಡಿರುವ ಅನ್ಯಾಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುವಾರ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಂಸತ್ ಸದಸ್ಯರು ಸ್ವಕ್ಷೇತ್ರದ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದಲೇ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿಯನ್ನು ಸ್ಥಾಪಿಸಿರುವುದು. ಹೀಗಾಗಿ ಆ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ವಿರೋಧಿಸಿದ್ದಾರೆ.

ಬಿಜೆಪಿ ಸಂಸದರು ಎಂಪಿ ಗ್ರಾಂಟ್‍ನಿಂದ 1ಕೋಟಿ ರೂ. ಮತ್ತು ವೇತನದ 1ಲಕ್ಷ ರೂ.ಗಳನ್ನು ಪಿಎಂ ಕೇರ್ ಫಂಡ್‍ಗೆ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿರುವ ಸೂಚನೆ ಬೇಜವಾಬ್ದಾರಿತನದ್ದು. ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಬೇಕಿರುವುದು ಪ್ರತಿಯೊಬ್ಬ ಸಂಸದನ ಜವಾಬ್ದಾರಿ ಎಂದು ಸಿದ್ದರಾಮಯ್ಯ ಇಂದಲ್ಲಿ ಸಲಹೆ ಮಾಡಿದ್ದಾರೆ.

ಕೊರೋನ ವೈರಸ್ ಸೋಂಕು ಯಾವುದೇ ಒಂದು ರಾಜ್ಯಕ್ಕೆ ಅಲ್ಲವೇ ಪ್ರದೇಶಕ್ಕೆ ಸೀಮಿತವಾದುದಲ್ಲ. ಪ್ರತಿಯೊಂದು ರಾಜ್ಯವೂ ಕಷ್ಟದಲ್ಲಿದೆ. ಎಂಪಿ ಲ್ಯಾಡ್ ಹಣವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಸ್ಥಳೀಯವಾಗಿ ಖರ್ಚು ಮಾಡುವಂತೆ ಮಾಡಬೇಕು ಎಂದು ಸಿದ್ಧರಾಮಯ್ಯ ಸೂಚಿಸಿದ್ದಾರೆ.

ತಮ್ಮದೆ ತೆರಿಗೆ ಹಣದಲ್ಲಿ ನ್ಯಾಯಯುತ ಪಾಲು ನೀಡದೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಖರ್ಚಾಗಬೇಕಿದ್ದ ಹಣವನ್ನೂ ಕೇಂದ್ರ ತರಿಸಿಕೊಂಡು ಮತ್ತೆ ಕರ್ನಾಟಕಕ್ಕೆ, ಹೊಸದಿಲ್ಲಿ ದೊರೆಗಳ ಎದುರು ಕೈಯೊಡ್ಡಿ ನಿಲ್ಲುವಂತೆ ಮಾಡಿದೆ ಎಂದು ಸಿದ್ದರಾಮಯ್ಯ, ಬಿಜೆಪಿ ಸಂಸದರು ಮತ್ತು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ಪಿಎಂ ಕೇರ್ ಫಂಡ್‍ಗೆ ಕೊಡಬೇಕಂತೆ. ಇಲ್ಲಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೋನ ನಿಯಂತ್ರಣಕ್ಕಾಗಿ ದೇಣಿಗೆ ಕೊಡುವಂತೆ ಸಾರ್ವಜನಿಕರ ಬಳಿ ಬೇಡಿಕೊಳ್ಳುತ್ತಿದ್ದಾರೆ. ಇದೆಂತಹ ವಿಪರ್ಯಾಸ? ಇದೆಂತಹ ಗುಲಾಮಗಿರಿ? ಎಂದು ಸಿದ್ದರಾಮಯ್ಯ ಟ್ವೀಟ್ಟರ್ ಮೂಲಕ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದ ಶಾಸಕರು ತಮ್ಮ ಒಂದು ತಿಂಗಳ‌ ಸಂಬಳವನ್ನು ಪಿಎಂ ಕೇರ್ ಫಂಡ್ ಗೆ ಕೊಡಬೇಕಂತೆ.
ಇಲ್ಲಿನ ಮುಖ್ಯಮಂತ್ರಿ @BSYBJP ಅವರು ಕೊರೊನಾ ನಿಯಂತ್ರಣಕ್ಕಾಗಿ ದೇಣಿಗೆ ಕೊಡುವಂತೆ ಸಾರ್ವಜನಿಕರ ಬಳಿ ಬೇಡಿಕೊಳ್ಳುತ್ತಿದ್ದಾರೆ. ಇದೆಂತಹ ವಿಪರ್ಯಾಸ? ಇದೆಂತಹ ಗುಲಾಮಗಿರಿ?
5/5#Corona pic.twitter.com/hsdJtpMPpY

— Siddaramaiah (@siddaramaiah) April 2, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X