ಕೇರಳ ರಾಜ್ಯದ ರೋಗಿಗಳನ್ನು ದ.ಕ.ಜಿಲ್ಲೆಯ ಆಸ್ಪತ್ರೆಗಳಲ್ಲಿ ದಾಖಲಿಸಬೇಡಿ: ಡಿಎಚ್‌ಒ ಸುತ್ತೋಲೆ

ಮಂಗಳೂರು: ಕೇರಳ ರಾಜ್ಯದಲ್ಲಿ ಕೊರೋನ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆ ರಾಜ್ಯದ ಯಾವುದೇ ರೋಗಿಗಳನ್ನು ದ.ಕ.ಜಿಲ್ಲೆಯ ಆಸ್ಪತ್ರೆಗಳಲ್ಲಿ ದಾಖಲಿಸದಂತೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.
ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





