Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿ ಒಂದು...

ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿ ಒಂದು ಸಾವಿರ ರೂ. ಜಮೆ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ3 April 2020 4:14 PM IST
share
ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿ ಒಂದು ಸಾವಿರ ರೂ. ಜಮೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಎ.3: 15 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ಈಗಾಗಲೆ ಒಂದು ಸಾವಿರ ರೂ.ಜಮಾ ಮಾಡಲಾಗಿದೆ. ಅವರಿಗೆ ಹೆಚ್ಚುವರಿಯಾಗಿ ಇನ್ನೂ ಒಂದು ಸಾವಿರ ರೂ.ಜಮಾ ಮಾಡಲು ಕಾರ್ಮಿಕ ಇಲಾಖೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದರು.

ವೈದ್ಯರು ಹಾಗೂ ನರ್ಸ್‍ಗಳಿಗೆ ನೀಡುವ ಪಿಪಿಇ ಕಿಟ್‍ಗಳ ಗುಣಮಟ್ಟ ಹಾಗೂ ಪಿಪಿಇ ಕಿಟ್‍ಗಳ ಕೊರತೆ ನಿವಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಈಗಾಗಲೆ 1 ಲಕ್ಷ ಪಿಪಿಇ ಕಿಟ್‍ಗಳ ಪೂರೈಕೆಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೂ 2 ಲಕ್ಷ ಪಿಪಿಇ ಕಿಟ್‍ಗಳ ಪೂರೈಕೆಗೆ ಕಾರ್ಯಾದೇಶ ನೀಡಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ. ಓಲಾ, ಊಬರ್ ಕಂಪೆನಿಗಳ ನೆರವಿನೊಂದಿಗೆ ತುರ್ತು ಸಂದರ್ಭದಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಸೇವೆಗೆ ವಾಹನ ಒದಗಿಸುವ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚಿಸಿದರು.

ನಗದಲ್ಲಿ ಉಚಿತ ಆಹಾರ ವಿತರಣೆ ಕ್ರಮ ಬದ್ಧವಾಗಿ ಆಗುತ್ತಿಲ್ಲ. ಇದನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರೊಂದಿಗೆ ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ, ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಸಚಿವರಾದ ಆರ್.ಅಶೋಕ್, ಎಸ್.ಸುರೇಶ್ ಕುಮಾರ್, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಡಾ.ಕೆ.ಸುಧಾಕರ್, ಬಿ.ಶ್ರೀರಾಮುಲು, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X