Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ನಿರಾಶ್ರಿತರು, ನಿರ್ಗತಿಕರಿಗೆ...

ಉಡುಪಿ: ನಿರಾಶ್ರಿತರು, ನಿರ್ಗತಿಕರಿಗೆ ಕೆಎಂಎಫ್‌ನಿಂದ ಉಚಿತ ಹಾಲು ವಿತರಣೆ

ವಾರ್ತಾಭಾರತಿವಾರ್ತಾಭಾರತಿ3 April 2020 5:35 PM IST
share
ಉಡುಪಿ: ನಿರಾಶ್ರಿತರು, ನಿರ್ಗತಿಕರಿಗೆ ಕೆಎಂಎಫ್‌ನಿಂದ ಉಚಿತ ಹಾಲು ವಿತರಣೆ

ಉಡುಪಿ, ಎ.3: ಸರಕಾರದ ನೋವೆಲ್ ಕೊರೋನಾ ನಿಯಂತ್ರಣ ಕ್ರಮಗಳಿಂದ ತೊಂದರೆಗೊಳಗಾದ ಉಡುಪಿ ಜಿಲ್ಲೆಯ ವಲಸೆ ಕಾರ್ಮಿಕರು, ನಿರಾಶ್ರಿತರು, ನಿರ್ಗತಿಕರು, ಕೂಲಿ ಕಾರ್ಮಿಕರು ಹಾಗೂ ಬಡ ಜನತೆಗೆ ಕೆಎಂಎಫ್ ವತಿಯಿಂದ ಪ್ರತಿನಿತ್ಯ 5000 ಲೀ. ಹಾಲನ್ನು ಎ.3ರಿಂದ 14ರವರೆಗೆ ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಉಡುಪಿ ನಗರಸಭೆ ಆವರಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ರಾಜ್ಯ ಸರಕಾರದ ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ವಲಸೆ ಕಾರ್ಮಿಕರು, ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡವರಿಗಾಗಿ ಇಂದಿನಿಂದ ಎ.14ರವರೆಗೆ ಪ್ರತಿನಿತ್ಯ 5000 ಲೀ. ಹಾಲನ್ನು ಉಚಿತವಾಗಿ ವಿತರಿಸಲಾಗುವುದು ಎಂದರು.

ಇದರಿಂದ ಲಾಕ್‌ಡೌನ್‌ನಿಂದ ಸಂಗ್ರಹವಾಗುತ್ತಿರುವ ಹೆಚ್ಚುವರಿ ಹಾಲನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಲು ಮತ್ತು ರೈತರಿಂದ ನಿರಂತರವಾಗಿ ಹಾಲು ಖರೀದಿ ಮಾಡುವ ಮೂಲಕ ರೈತರ ಬೆಂಬಲಕ್ಕೆ ನಿಲ್ಲಲು ಸಾಧ್ಯವಾಗಲಿದೆ. ಈಗಾಗಲೇ ಜಿಲ್ಲಾಡಳಿತದಿಂದ ಗುರುತಿಸಲಾಗಿರುವ ಪ್ರದೇಶಗಳಿಗೆ ಕೆಎಂಎಫ್ ವಾಹನ ತೆರಳಿ, ಅಲ್ಲಿ ಸಂಬಂದಪಟ್ಟ ಅಧಿಕಾರಿಗಳಿಗೆ ನಿಗದಿತ ಪ್ರಮಾಣದ ಹಾಲಿನ ಪಾಕೆಟ್‌ಗಳನ್ನು ನೀಡಲಿದ್ದು, ಅವರು ಸಂಬಂಧಪಟ್ಟ ಫಲಾನುಭವಿಗಳಿಗೆ ಅವುಗಳನ್ನು ತಲುಪಿಸಲಿದ್ದಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಕೆಎಂಫ್‌ನ ಈ ಉಚಿತ ಹಾಲು ವಿತರಣೆಯಿಂದ ನಿರಾಶ್ರಿತರಿಗೆ, ಬಡವರಿಗೆ ನೆರವಾಗುವ ಜೊತೆಗೆ ಜಿಲ್ಲೆಯ ರೈತರು ಹೈನುಗಾರಿಕೆಯನ್ನು ನಿರಂತರವಾಗಿ ಮುಂದುವರಿಸಲು ಸಾಧ್ಯವಾಗಲಿದೆ. ಉಚಿತ ಹಾಲು ವಿತರಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಈಗಾಗಲೇ ಜಿಲ್ಲಾಡಳಿತ ಕ್ರಮಗಳನ್ನು ಕೈಗೊಂಡಿದ್ದು, ಈ ಬಗ್ಗೆ ಪ್ರತಿದಿನ ಪರಿಶೀಲನೆ ನಡೆಸಲಾಗುವುದು ಎಂದರು.

ಕಾರ್ಯಕ್ರಮದ ನಂತರ ಉಡುಪಿಯ ಬೋರ್ಡ್ ಸ್ಕೂಲ್ ಶಿಬಿರದಲ್ಲಿದ್ದ ನಿರಾಶ್ರಿತರಿಗೆ ಉಚಿತ ಹಾಲು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಕೆಎಂಎಫ್‌ನ ಎಂಡಿ ಡಾ.ಜಿ.ವಿ.ಹೆಗಡೆ, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಡಾ.ರವಿರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X