ಧರ್ಮ ಸಭೆಯಲ್ಲಿ ಭಾಗವಹಿಸಿದವರು ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು: ಡಿಸಿಎಂ ಕಾರಜೋಳ

ಬೆಂಗಳೂರು, ಎ.3: ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನಿಝಾಮುದ್ದೀನ್ ಧರ್ಮ ಸಭೆಯಲ್ಲಿ ಭಾಗವಹಿಸಿದವರು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕೆಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.
ವೈದ್ಯಕೀಯ ತಪಾಸಣೆಗೊಳಗಾಗುವುದನ್ನು ನಿರ್ಲಕ್ಷಿಸಿದಲ್ಲಿ ತಮ್ಮ ಜೀವಕ್ಕೆ ಮತ್ತು ಬಂಧು ಬಳಗದವರ ಜೀವಕ್ಕೂ ತೊಂದರೆ ಮಾಡಿದಂತಾಗುತ್ತದೆ. ಅಲ್ಲದೇ ಸಮುದಾಯದ ಸ್ವಾಸ್ಥ್ಯವನ್ನು ಹಾಳು ಮಾಡಿದಂತಾಗುತ್ತದೆ. ಹೀಗಾಗಿ ನಿಝಾಮುದ್ದೀನ್ ಧರ್ಮ ಸಭೆಯಲ್ಲಿ ಭಾಗವಹಿಸಿದವರು ಕಡ್ಡಾಯವಾಗಿ ತಪಾಸಣೆಗೆ ಒಳಗಾಗಬೇಕು.
ಕೊರೋನ ಸೋಂಕಿನ ತಪಾಸಣೆಗೆ ಒಳಗಾಗದೆ ನಿರ್ಲಕ್ಷ್ಯ ವಹಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಗಳಿಗೆ ಸೂಚನೆ ನೀಡಲಾಗಿದೆ. ಇದರೊಂದಿಗೆ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರಕಾರದ ನಿಯಮಗಳನ್ನು ಪಾಲಿಸಬೇಕೆಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





